ಬಿಜೆಪಿ,ಕಾಂಗ್ರೆಸ್ ಬೆಂಬಲಿತರ ನಡುವೆ ನೇರ ಸ್ಪರ್ಧೆ ನಡೆದಿತ್ತು
ಪುತ್ತೂರು: ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ರಚನೆಗಾಗಿ ದ.30ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯ ಸಾಧಿಸಿದ್ದಾರೆ. 12 ಸ್ಥಾನಗಳಿಗೆ ಒಟ್ಟು 24 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದರು. ಐವತ್ತು ವರ್ಷಗಳ ಸುಧೀರ್ಘ ಇತಿಹಾಸ ಹೊಂದಿರುವ ಕೋಡಿಂಬಾಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇದೇ ಪ್ರಥಮ ಬಾರಿ ಚುನಾವಣೆ ಏರ್ಪಟ್ಟಿತ್ತು. 50 ವರ್ಷಗಳಲ್ಲಿ ನಿರಂತರವಾಗಿ ಬಿಜೆಪಿ ಬೆಂಬಲಿತರು ಅಧಿಕಾರ ನಡೆಸಿದ್ದ ಸಹಕಾರ ಸಂಘದಲ್ಲಿ ಈ ಬಾರಿ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆದಿದ್ದಾರೆ.
ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿತರ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು ಕಾಂಗ್ರೆಸ್ ಏಳು ಮತ್ತು ಬಿಜೆಪಿ ಐದು ಸ್ಥಾನ ಪಡೆದಿದೆ.
ರಿಟರ್ನಿಂಗ್ ಅಧಿಕಾರಿಯಾಗಿ ಪುತ್ತೂರು ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಯ ಮಾರಾಟಾಧಿಕಾರಿ ಶೋಭಾ ಎನ್.ಎಸ್. ಕಾರ್ಯ ನಿರ್ವಹಿಸಿದ್ದರು.