ಬೆಟ್ಟಂಪಾಡಿ : ಮೂಡಪ್ಪ ಸೇವೆ – ದುರ್ಗಾ ನಮಸ್ಕಾರ ಪೂಜೆ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಗಣಪತಿ ದೇವರಿಗೆ ಮೂಡಪ್ಪ ಸೇವೆ ಹಾಗೂ ವನದುರ್ಗೆಗೆ ದುರ್ಗಾನಮಸ್ಕಾರ ಪೂಜೆಯು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ದ. 30 ರಂದು ನೆರವೇರಿತು. ಸಂಜೆ ಶ್ರೀ ಮಹಾಲಿಂಗೇಶ್ವರ ಭಜನಾ ಸಂಘದ ಸಂಯೋಜನೆಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.

ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು, ಆಡಳಿತ ಸಮಿತಿ ಸದಸ್ಯರು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಮನಮೋಹನ ರೈ, ಪ್ರ.ಕಾರ್ಯದರ್ಶಿ ವಸಂತಕೃಷ್ಣ ಕೋನಡ್ಕ, ಸಂಚಾಲಕ ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ, ಪದಾಧಿಕಾರಿಗಳು, ಸದಸ್ಯರು, ಹಾಗೂ ಊರ ಪರವೂರ ಭಕ್ತಾಭಿಮಾನಿಗಳು ಪಾಲ್ಗೊಂಡರು.ರಾತ್ರಿ ಅನ್ನಸಂತರ್ಪಣೆ ನಡೆದು ಸಾವಿರಕ್ಕೂ ಮಿಕ್ಕಿ ಮಂದಿ ಅನ್ನಪ್ರಸಾದ ಸ್ವೀಕರಿಸಿದರು.

ಇಂದು ಲಕ್ಷ ಬಿಲ್ವಾರ್ಚನೆ – ವರದಶಂಕರ ಪೂಜೆ
ದ. 31 ರಂದು ಕ್ಷೇತ್ರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಲಕ್ಷ ಬಿಲ್ವಾರ್ಚನೆ, ವರದಶಂಕರ ಪೂಜೆ, ಶಿವಪಂಚಾಕ್ಷಿ ಹೋಮ ಹಾಗೂ ದುರ್ಗಾಹೋಮ ನಡೆಯಲಿದೆ.

LEAVE A REPLY

Please enter your comment!
Please enter your name here