ಪುತ್ತೂರು:ಪೆರ್ಲಂಪಾಡಿ ಷಣ್ಮುಖದೇವ ಪ್ರೌಢಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭವು ಡಿ.29ರಂದು ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೇವತಿ ವಹಿಸಿದ್ದರು.ಪುತ್ತೂರು ವಲಯ ಅರಣ್ಯಾಧಿಕಾರಿ ಕಿರಣ್ ಬಿ ಎಂ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ಗಂಗಾಧರ ಗೌಡ ಕೆಮ್ಮಾರ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.ಮುಖ್ಯ ಅತಿಥಿ ಯಶೋಧಾ ಬಾಬು ರಾಜೇಂದ್ರ, ಶಾಲಾ ಅಧ್ಯಕ್ಷ ತೀರ್ಥಾನಂದ ದುಗ್ಗಳೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಇರ್ ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕಾರ ವಂತ ಮಕ್ಕಳಾಗಿ, ಒಳ್ಳೆಯ ಅಂಕಗಳನ್ನು ಪಡೆದುಕೊಳ್ಳಿ ಎಂದು ನುಡಿದರು. ಸೀತಾರಾಮ ಕೆ ಅಮಳ ವಂದಿಸಿದರು
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಅಧ್ಯಕ್ಷ ತೀರ್ಥಾನಂದ ದುಗ್ಗಳ ವಹಿಸಿ ಮಾತನಾಡಿ ಶಾಲೆ ನಡೆದುಬಂದ ದಾರಿ, ಅದಕ್ಕಾಗಿ ಶ್ರಮಿಸಿದ ಮಹಾನ್ ಚೇತನಗಳನ್ನು ನೆನಪಿಸುತ್ತಾ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸೋಣ ಶಾಲಾ ಪ್ರಗತಿಗಾಗಿ ದುಡಿಯೋಣ ಎಂದರು. ಮಾತೃ ಸಂಸ್ಥೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಕ್ಕಮ್ಮ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಮುಖ್ಯ ಗುರು ಕೃಷ್ಣವೇಣಿ ಶಾಲಾ ವರದಿಯನ್ನು ಮಂಡಿಸಿದರು.ದಾನಿಗಳಾದ ಶ್ರೀರಾಮ ಭಟ್ ಸಿದ್ಧಮೂಲೆ , ಗುಣವತಿ ಅಮ್ಮ ಸಿದ್ಧಮೂಲೆ ಇವರನ್ನು ಸಭೆಯಲ್ಲಿ ಗೌರವಿಸಲಾಯಿತು.ಸಂಚಾಲಕ ಶಿವರಾಮ ಭಟ್ ಬೀರ್ಣಕಜೆ ಸ್ವಾಗತಿಸಿ, ಶಾಲಾ ಖಜಾಂಚಿ ದಿವಾಕರ ರೈ ಕೆರೆಮೂಲೆ ವಂದಿಸಿದರು.ಶಿಕ್ಷಕರಾದ ಭವ್ಯ ಹಾಗೂ ದೀಪ್ತಿ ನಿರೂಪಿಸಿದರು. ಆ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳು ಪದಾಧಿಕಾರಿಗಳು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ನೆರೆಯ ಶಾಲೆಯ ಅಧ್ಯಾಪಕ ಮಿತ್ರರು, ಪೋಷಕರು, ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು,ಊರ ಪರವೂರ ದಾನಿಗಳು ಉಪಸ್ಥಿತರಿದ್ದರು.