ದರ್ಬೆತ್ತಡ್ಕ ಸರಕಾರಿ ಉನ್ನತ ಹಿ.ಪ್ರಾ.ಶಾಲಾ ವಾರ್ಷಿಕೋತ್ಸವ, ಸನ್ಮಾನ

0

ಪುತ್ತೂರು: ದರ್ಬೆತ್ತಡ್ಕ ದ ಕ ಜಿ ಪಂ ಉ ಹಿ ಪ್ರಾ ಶಾಲೆಯಲ್ಲಿ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ ದ.29ರಂದು ಜರಗಿತು. ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕರಾದ ಬಾಲಕೃಷ್ಣ ರೈ ಸೇರ್ತಾಜೆ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಒಳಮೊಗ್ರು ಗ್ರಾಪಂ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಸಭಾಧ್ಯಕ್ಷತೆ ವಹಿಸಿ, ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು.


ವೇದಿಕೆಯಲ್ಲಿ ಒಳಮೊಗ್ರು ಗ್ರಾಪಂ ಸದಸ್ಯರುಗಳಾದ ಪ್ರದೀಪ್ ಎಸ್, ರೇಖಾ ಬಿಜತ್ರೆ, ಶಾರದಾ ಅರಿಯಡ್ಕ ಗ್ರಾಪಂ ಸದಸ್ಯ ಸದಾನಂದ ಮನಿಯಾಣಿ, ಎಸ್‌ಡಿಎಂಸಿ ಅಧ್ಯಕ್ಷ ಕೊರಗಪ್ಪ ನಾಯ್ಕ, ಹಿರಿಯ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ತಾರಾನಾಥ ರೈ ಸೇರ್ತಾಜೆ, ಅಧ್ಯಕ್ಷ ವಸಂತ ಶೆಟ್ಟಿ ಕಲ್ಲಡ್ಕ , ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ವಾಸುಮಣಿಯಾಣಿ, ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಕೈಕಾರ, ದರ್ಬೆತ್ತಡ್ಕ ಕುಕ್ಕುತಡಿ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ ಸನ್ನಿಧಾನದ ಮೊಕ್ತೇಸರ ಜಯರಾಮ ಪೂಜಾರಿ ಕುಕ್ಕುತ್ತಡಿ, ದೇವಿನಗರ ಶ್ರೀದೇವಿ ಕ್ಲಿನಿಕ್‌ನ ಡಾ. ಶಿವಪ್ರಸಾದ್ ಶೆಟ್ಟಿ, ಹಿರಿಯ ವಿದ್ಥಾರ್ಥಿ ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಗೋವಿಂದಮೂಲೆ, ಶ್ರೀ ವಿಷ್ಣುಮೂರ್ತಿ ಒತ್ರೆಕೋಲ ಸಮಿತಿ ಅಧ್ಯಕ್ಷ ರವೀಂದ್ರ ಡಿ , ಹೆಬ್ರಿ ಮುದ್ರಾಡಿ ಸ.ಕಿ.ಪ್ರಾ.ಶಾಲಾ ಶಿಕ್ಷಕಿ ಶೋಭಾಕುಮಾರಿ, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಬಾಬು ಉಪಸ್ಥಿತರಿದ್ದರು. ಎಸ್‌ಡಿಎಂಸಿ ಉಪಾಧ್ಯಕ್ಷೆ ಸಹನಾ ಕುಮಾರಿ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲಾ ಪ್ರಭಾರ ಮುಖ್ಯ ಗುರುಗಳಾದ ರಾಜು ಎಸ್ ಟಿ ಶಾಲಾ ವರದಿ ವಾಚಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ಹಸ್ತ ಪತ್ರಿಕೆ ಬಿಡುಗಡೆ ಮಾಡಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ನಡೆದ ವಿವಿಧ ಸ್ಪರ್ಧಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಲಾಯಿತು. ಸೇವಾಮನೋಭಾವ ದಿಂದ ಶಾಲೆಗೆ ಸಹಕರಿಸಿದವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಅತಿಥಿ ಶಿಕ್ಷಕರಾದ ಯೋಗಿನಿ, ಚೈತ್ರಾ ರೈ, ಅಶ್ವಿತಾ, ಜ್ಯೋತಿ ಸಹಕರಿಸಿದರು. ಹಿರಿಯ ವಿದ್ಯಾರ್ಥಿನಿ ಚೈತ್ರಾ ಮಾಯಿಲಕೊಚ್ಚಿ ಮತ್ತು ಶಿಕ್ಷಕ ಗಿರೀಶ್ ಕಾರ್ಯಕ್ರಮ ನಿರ್ವಹಿಸಿದರು.

ಸನ್ಮಾನ ಕಾರ್ಯಕ್ರಮ
ಈ ಸಂದರ್ಭದಲ್ಲಿ ಹಲವು ಸಾಧಕರನ್ನು ಸನ್ಮಾನಿಸಲಾಯಿತು. ಮಣಿಕಂಠ ಕುಣಿತ ಭಜನಾ ತಂಡದ ಗುರುಗಳಾದ ಮೋಹನ ಕೆ , ಕುಲಕಸುಬು ವೃತ್ತಿದಾರರಾದ ಬಟ್ಯ ಕೊರಗ, ಮಂಗಳೂರು ಐಸಿಐಸಿಐ ಬ್ಯಾಂಕ್ ಪ್ರಬಂಧಕ ಸುನಿಲ್ ಕುಮಾರ್ , ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಶ್ರೀನಿಕ, ಸೃಜನ್ ಕೆ ಪಿ ಮತ್ತು ಪ್ರಜ್ಞಾರವರನ್ನು ಸನ್ಮಾನಿಸಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here