ಪುತ್ತೂರು: ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ 14ರ ವಯೋಮಾನದ ರಾಷ್ಟ್ರಮಟ್ಟದ ಕ್ರೀಡಾಕೂಟದ ಎತ್ತರ ಜಿಗಿತದಲ್ಲಿ ಚಿನ್ನದ ಪದಕ ಪಡೆದ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಗುಮ್ಮಟೆಗದ್ದೆಯ ಜಿ.ಎಂ. ಕೀರ್ತಿಯವರನ್ನು ಶಾಸಕ ಅಶೋಕ್ ರೈಯವರು ಡಿ.31ರಂದು ಅವರ ನಿವಾಸಕ್ಕೆ ತೆರಳಿ ಸನ್ಮಾನಿಸಿದರು.
ಅಭಿನಂದಿಸಿದ ಶಾಸಕರು ಮಾತನಾಡಿ, ರಾಷ್ಟ್ರ ಮಟ್ಟದಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ಕಲಿತ ಶಾಲೆ, ಹುಟ್ಟೂರು ಹಾಗೂ ತಾಲೂಕಿನ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಪಸರಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆ ಮಾಡಬೇಕು. ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಉಪ್ಪಳಿಗೆ ಸರಕಾರಿ ಪ್ರೌಢ ಶಾಲಾ ಕಾರ್ಯಾಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಗ್ರಾ.ಪಂ ಸದಸ್ಯ ನವೀನ್ ರೈ ಚೆಲ್ಯಡ್ಕ, ರೈ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ನಿತ್ಯಾನಂದ ಬೈಲಾಡಿ, ಪುತ್ತು ಚೆಲ್ಯಡ್ಕ, ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ದೈಹಿಕ ಶಿಕ್ಷಣ ಶಿಕ್ಷ ದಾಮೋದರ ಕಜೆ, ಕೀರ್ತಿ ತಂದೆ ಮೋನಪ್ಪ ಗೌಡ, ತಾಯಿ ಲಲಿತಾ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.