ಮೊಟ್ಟೆತ್ತಡ್ಕ-ಮಣ್ಣಾಪು ಕೊರಗಜ್ಜ ಕ್ಷೇತ್ರದ 4ನೇ ವರ್ಷದ ವಾರ್ಷಿಕ ನೇಮೋತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

0

ಮಣ್ಣಾಪು ಕೊರಗಜ್ಜ ಕ್ಷೇತ್ರ ಶಕ್ತಿ ಕೇಂದ್ರದ ಸಾನಿಧ್ಯವಾಗಿದೆ-ರವೀಂದ್ರ ಶೆಟ್ಟಿ ನುಳಿಯಾಲು

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಶ್ರೀ ಕ್ಷೇತ್ರದಲ್ಲಿ ಜನವರಿ ತಿಂಗಳಿನಲ್ಲಿ ನಡೆಯುವ ವಾರ್ಷಿಕ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದ.31 ರಂದು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ಅಧ್ಯಕ್ಷತೆಯಲ್ಲಿ ನೆರವೇರಿತು.


ಮಣ್ಣಾಪು ಕೊರಗಜ್ಜ ಕ್ಷೇತ್ರ ಶಕ್ತಿ ಕೇಂದ್ರದ ಸಾನಿಧ್ಯವಾಗಿದೆ-ರವೀಂದ್ರ ಶೆಟ್ಟಿ ನುಳಿಯಾಲು:
ಶ್ರೀ ಕ್ಷೇತ್ರದ ಗೌರವಾಧ್ಯಕ್ಷರಾದ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ, ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನವು ವರ್ಷದಿಂದ ವರ್ಷಕ್ಕೆ ಭಕ್ತರ ಭಕ್ತಿಯಿಂದ ಅಭಿವೃದ್ಧಿ ಹೊಂದುತ್ತಿದೆ ಮಾತ್ರವಲ್ಲದೆ ತಾಲೂಕಿನಾದ್ಯಂತ ಶ್ರೀ ಕ್ಷೇತ್ರದ ಬಗ್ಗೆ ಉತ್ತಮ ಸಂದೇಶ ಹೋಗುತ್ತಿದೆ. ಈಗಾಗಲೇ ಶ್ರೀ ಕ್ಷೇತ್ರದಲ್ಲಿ ಚಪ್ಪರ, ಅನ್ನಛತ್ರ, ಶೌಚಾಲಯ ಮುಂತಾದ ಮೂಲಭೂತ ಸೌಕರ್ಯಗಳು ದಾನಿಗಳ ಸಹಕಾರದಿಂದ ಯಶಸ್ವಿಯಾಗಿ ನೆರವೇರಿದೆ. ಶ್ರೀ ಕ್ಷೇತ್ರಕ್ಕೆ ಆಗಮಿಸಿ ಭಕ್ತಿಯಿಂದ ಪ್ರಾರ್ಥಿಸುವ ಭಕ್ತರಿಗೆ ಶ್ರೀ ಕೊರಗಜ್ಜ ವರವ ನೀಡಿ ಆಶೀರ್ವದಿಸುತ್ತಿದ್ದು, ಮಾತ್ರವಲ್ಲದೆ ಶ್ರೀ ಕ್ಷೇತ್ರ ಶಕ್ತಿ ಕೇಂದ್ರವಾಗಿ ಹೊರ ಹೊಮ್ಮುತ್ತಿದೆ. ಶ್ರೀ ಕ್ಷೇತ್ರವನ್ನು ಎಲ್ಲರೂ ನಮ್ಮದು ಎಂದು ಅರಿತು ಮುಂದಿನ ದಿನಗಳಲ್ಲಿ ನಡೆಯುವ ವಾರ್ಷಿಕ ನೇಮೋತ್ಸವವನ್ನು ಶಿಸ್ತುಬದ್ಧವಾಗಿ ನಡೆಸುತ್ತಾ ಯಶಸ್ವಿಗೊಳಿಸಬೇಕು ಎಂದರು.


ಶ್ರೀ ಕ್ಷೇತ್ರದ ಅರ್ಚಕರಾದ ಕುಂಡ ಮೊಗೇರ, ಅಣ್ಣು ಮಣ್ಣಾಪು, ರವಿ ಮಣ್ಣಾಪು, ಮಧ್ಯಸ್ತರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ಶ್ರೀ ಕ್ಷೇತ್ರದ ಅಧ್ಯಕ್ಷ ವಿಶ್ವನಾಥ್ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ್ ಪೂಜಾರಿ ಮೊಟ್ಟೆತ್ತಡ್ಕ, ಸುಧೀರ್ ಅತ್ತಾಳ, ಗುರುವ ಮಣ್ಣಾಪು, ಪುತ್ತೂರು ಪ್ಲಾಸ್ಟಿಕ್‌ನ ಸಿದ್ಧಲಿಂಗೇಶ್, ಸುಜೀರ್ ಶೆಟ್ಟಿ ನುಳಿಯಾಲು, ರವಿಚಂದ್ರ ನಾಯ್ಕ್ ಉದಯಗಿರಿ, ಗಿರಿಧರ್ ಗೌಡ ಆಮೆಮನೆ ಸಂಪ್ಯ ಸಹಿತ ಊರಿನ ಮತ್ತು ಶ್ರೀ ಕ್ಷೇತ್ರದ ಭಕ್ತಾಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಂಗಾಧರ್ ಮಣ್ಣಾಪು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here