ಪುತ್ತೂರು: ಬನ್ನೂರು ಕರ್ಮಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಪೂರ್ವಭಾವಿ ಸಭೆ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಲೋಕೇಶ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಫೆ. 24,25ರಂದು ವರ್ಷಂಪ್ರತಿ ಯಂತೆ ಭಕ್ತಾದಿಗಳ ಸಹಕಾರ ದೊಂದಿಗೆ ವಿಜ್ರಂಭಣೆಯಿಂದ ನಡೆಯುವ ಜಾತ್ರೆಯ ಕುರಿತು ಸಭಕ್ತರು ಹಲವು ಸಲಹೆ ಸೂಚನೆ ನೀಡಿದರು. ದೇವಸ್ಥಾನ ಜಾತ್ರೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಗಣೇಶ್ ಕರ್ಮಲ ಸ್ವಾಗತಿಸಿದರು. ಧರ್ಮದರ್ಶಿ ರಾಜಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಜಾತ್ರೆಯ ಬಗ್ಗೆ ನಡೆದ ತಯಾರಿ ಯನ್ನು ವಿವರಿಸಿದರು, ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ದಿನಕರ ಗೌಡ ಬುಡ್ಲೆಗುತ್ತು, ಕಾರ್ಯದರ್ಶಿ ಕೃಷ್ಣಪ್ಪ ಗೌಡ ಉಪಸ್ಥಿತರಿದ್ದರು. ಉತ್ಸವ ಸಮಿತಿಯ ಚಂದ್ರಯ್ಯ ವಂದಿಸಿದರು.