ಪುತ್ತೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ – ಮಾಹಿತಿ ಕಾರ್ಯಗಾರ

0

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ, ದೇಶದ ಬಡಜನರಿಗೆ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಆದರೆ, ಜನಸಾಮಾನ್ಯರಿಗೆ ಅನುಕೂಲವಾಗಬೇಕಾದ ಅನೇಕ ಯೋಜನೆಗಳ ಬಗ್ಗೆ ಅದೆಷ್ಟೋ ಜನರಿಗೆ ಮಾಹಿತಿಯೇ ಇಲ್ಲ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಜ್ಯದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪುತ್ತೂರಿನಲ್ಲಿ ಬ್ಯಾಂಕ್ ಆಫ್ ಬರೋಡಾದ ನೇತೃತ್ವದಲ್ಲಿ ಡಿ.31ರಂದು ಪುರಭವನದಲ್ಲಿ ಕಾರ್ಯಕ್ರಮ ನಡೆಯಿತು.

ದೇಶದಲ್ಲಿ ಪ್ರಧಾನಿ ಅವರ ನೇತೃತ್ವದ ಸರ್ಕಾರ ಬಂದು 9 ವರ್ಷ ಕಳೆದಿದೆ. ದೇಶದ ಬಡಜನರು, ಸಾಮಾನ್ಯ ಜನರು, ರೈತರು ಸೇರಿದಂತೆ ಅನೇಕ ವರ್ಗದ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಪ್ರಧಾನಿ ಮೋದಿ ಅವರು ಅನೇಕ ಯೋಜನೆಗಳನ್ನ ಜಾರಿ ಮಾಡಿದ್ದಾರೆ. ಪಿಎಂ ಕೃಷಿ ಸಮ್ಮನ್ ಯೋಜನೆ, ಪಿಎಂ ಜೀವನ್ ಜ್ಯೋತಿ, ಪ್ರಧಾನ ಮಂತ್ರಿ ಸುರಕ್ಷ ಭೀಮ ಯೋಜನೆ, ಆಟಲ್ ಪಿಂಚಣಿ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ, ಸ್ವಸಹಯ ಗುಂಪುಗಳಿಗೆ ಸಾಲ ಯೋಜನೆ, ಪಿಎಂ ವಿದ್ಯಾರ್ಥಿ ವೇತನ, ಆಯುಷ್ ಮಾನ್ ಕಾರ್ಡ್ ವಿತರಣೆ, ಜಲ್ ಜೀವನ್ ಮಿಷನ್ ಸೇರಿದಂತೆ ಅನೇಕ ಯೋಜನೆಗಳನ್ನ ಜಾರಿ ಮಾಡಿದೆ. ಆದರೆ, ಈ ಯೋಜನೆಗಳ ಬಗ್ಗೆ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮಾಹಿತಿ ನೀಡುವ ಕಾರ್ಯಕ್ರಮ ಸಾಲ ಯೋಜನೆ ಕುರಿತು ಬ್ಯಾಂಕ್‌ಗಳ ಮೂಲಕ ಕಾರ್ಯಕ್ರಮ ನಡೆಯುತ್ತಿದ್ದು, ಪುತ್ತೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಪುತ್ತೂರು ನಗರಸಭೆ ಸದಸ್ಯೆ ಭಾಮಿ ಅಶೋಕ್ ಶೆಣೈ, ಬ್ಯಾಂಕ್ ಆಫ್ ಬರೋಡಾದ ದರ್ಬೆ ಶಾಖೆಯ ಮ್ಯಾನೇಜರ್ ಸಿದ್ದಿಕ್, ನಿವೃತ್ತ ಬ್ಯಾಂಕ್ ಅಧಿಕಾರಿ ಎ.ಜೆ.ರೈ, ಗೀತಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತೂರು ನಗರಸಭೆ ಸಮುದಾಯ ಸಂಘಟಕ ಕರುಣಾಕರ್ ವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸಾಲ ಯೋಜನೆ ಕುರಿತು ಮಾಹಿತಿ ನೀಡಿದರು. ಪಶುಪತಿ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಉದ್ಯಮಿ ಸೀತಾರಾಮ ರೈ ಕೆದಂಬಾಡಿಗುತ್ತು, ದಿನೇಶ್ ಪಂಜಿಗ, ನಗರಸಭೆ ಸದಸ್ಯ ಮನೋಹರ್ ಕಲ್ಲಾರೆ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದುಷಿ ನಯನಾ ವಿ ರೈ ಅವರ ಶಿಷ್ಯಂದಿರಿಂದ ನೃತ್ಯ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here