ಆರ್ಲಪದವು : ಯುವಕ ಆತ್ಮಹತ್ಯೆ

0

ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ಎಂಬಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.1ರಂದು ಸಂಜೆ ಬೆಳಕಿಗೆ ಬಂದಿದೆ. ಆರ್ಲಪದವು ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿರುವ ಶಿವಪ್ಪ ನಾಯ್ಕ ಎಂಬವರ ಪುತ್ರ ವಿಜಯ ಕುಮಾರ್‌ ಎಸ್(25ವ)ಎಂಬವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ತಂದೆಯ ಜೊತೆ ತಾನು ಮೇಸ್ತ್ರಿಯಾಗಿ ಕೆಲಸಕ್ಕೆ ತೆರಳುತ್ತಿದ್ದ ಇವರು ಗುತ್ತಿಗೆದಾರರಾಗಿಯೂ ಕೆಲಸ ಮಾಡುತ್ತಿದ್ದರು. ಅವಿವಾಹಿತರಾಗಿದ್ದ ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ , ಸಹೋದರ, ಮತ್ತು ಸಹೋದರಿಯನ್ನು ಅಗಲಿದ್ದಾರೆ. ಸಂಪ್ಯ ಪೊಲೀಸರು ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here