ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 2 ವಿದ್ಯಾರ್ಥಿಗಳು ಕರ್ನಾಟಕ ಬ್ಯಾಂಕ್ ಹುದ್ದೆಗೆ ಆಯ್ಕೆ

0

ಪುತ್ತೂರು : ಕರ್ನಾಟಕ ಬ್ಯಾಂಕ್ ಕ್ಲರಿಕಲ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉದ್ಯೋಗಕ್ಕೆ ಆಯ್ಕೆಗೊಂಡಿರುತ್ತಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಮಹೇಶ್ ಕೆ ಎಂ ರವರು ಪುತ್ತೂರಿನ ನಿವಾಸಿಯಾಗಿದ್ದು, ಶ್ರೀವತ್ಸ ಭಾರದ್ವಾಜ್ ರವರು ಸುಳ್ಯದ ನಿವಾಸಿಯಾಗಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ ಎಜುಕೇಷನಲ್ ಅವಾರ್ಡ್ ಪಡೆದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷಾ ತರಬೇತಿಯನ್ನು ಪಡೆದಿರುತ್ತಾರೆ.
ಉದ್ಯೋಗ ಮಾರ್ಗದರ್ಶನದೊಂದಿಗೆ ಗುಣಮಟ್ಟದ ತರಬೇತಿಗೆ ಹೆಸರುವಾಸಿಯಾದ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯು 2010ರಲ್ಲಿ ಸ್ಥಾಪನೆಗೊಂಡು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ, ಸಹಕಾರ ಕ್ಷೇತ್ರ, ಕೇಂದ್ರ ಹಾಗು ರಾಜ್ಯ ಸರಕಾರದ ಅಡಿಯಲ್ಲಿ ಬರುವ ಅನೇಕ ಹುದ್ದೆಗಳನ್ನು ಈ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಅಲಂಕರಿಸಿರುವುದು ಪುತ್ತೂರಿಗೆ ಹೆಮ್ಮೆಯ ವಿಷಯ.
ಪ್ರತಿ ವಿದ್ಯಾರ್ಥಿಯೊಂದಿಗೆ ನಿರಂತರ ಸಂಪರ್ಕವನ್ನಿರಿಸಿ, ಅವರನ್ನು ಉದ್ಯೋಗದತ್ತ ಕೊಂಡೊಯ್ಯುವುದು ಈ ಶಿಕ್ಷಣ ಸಂಸ್ಥೆಯ ಧೇಯವಾಗಿದ್ದು ಸರಕಾರಿ ಹಾಗು ಖಾಸಗಿ ಉದ್ಯೋಗಗಳ ಮಾಹಿತಿಯನ್ನು ನಿರಂತರವಾಗಿ ಪ್ರತಿ ಉದ್ಯೋಗಾಕಾಂಕ್ಷಿಗಳಿಗೂ ಮೆಸೇಜುಗಳ ಮೂಲಕ ತಲುಪಿಸುವುದು ಈ ಶಿಕ್ಷಣ ಸಂಸ್ಥೆಯ ವೈಶಿಷ್ಟ್ಯತೆ.
ಪ್ರತಿದಿನದ ಹಾಗು ವಾರಾಂತ್ಯದ ಬ್ಯಾಚುಗಳು ಲಭ್ಯವಿದ್ದು (ಆನ್ಲೈನ್/ ಆಫ್ಲೈನ್), ಆಸಕ್ತರು ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಾಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ದೂರವಾಣಿ ಸಂಖ್ಯೆ 9632320477 / 9945988118 ನ್ನು ಸಂಪರ್ಕಿಸಬಹುದು ಬಹುದು ಎಂದು ಸಂಸ್ಥೆ ಪ್ರಕಟಣೆ ನೀಡಿದೆ.

LEAVE A REPLY

Please enter your comment!
Please enter your name here