ಜ.4 : ವಿದ್ಯುತ್ ನಿಲುಗಡೆ

0

ಪುತ್ತೂರು: ರಸ್ತೆ ಅಗಲೀಕರಣಕ್ಕಾಗಿ ವಿದ್ಯುತ್ ಲೈನ್ ಸ್ಥಳಾಂತರ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್, ಉಪ್ಪಿನಂಗಡಿ ವಾಟರ್ ಸಪ್ಲೈ ಮತ್ತು ಉಪ್ಪಿನಂಗಡಿ ಎಕ್ಸ್‌ಪ್ರೆಸ್ ಮತ್ತು 110/11ಕೆವಿ ಕರಾಯ ವಿದ್ಯುತ್ ಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಫೀಡರ್‌ನಲ್ಲಿ ಜ.4 ಗುರುವಾರದಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:30ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.
ಆದುದರಿಂದ, 110/33/11ಕೆವಿ ಪುತ್ತೂರು ಮತ್ತು 10/11ಕೆವಿ ಕರಾಯ ವಿದ್ಯುತ್ ಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಹಾರಾಡಿ, ಪಡೀಲು, ಬೊಳುವಾರು, ಮಯೂರ ಬಳಿ, ಕೊಂಬೆಟ್ಟು, ಕೋರ್ಟ್ ರೋಡ್, ಮಿನಿ ವಿಧಾನ ಸೌಧ, ತಾಲೂಕು ಪಂಚಾಯತ್, ಪರ್ಲಡ್ಕ, ಬೈಪಾಸ್ ರಸ್ತೆ, ನೆಕ್ಕಿಲಾಡಿ ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here