ನಂಜನಗೂಡು ಉತ್ಸವ ಮೂರ್ತಿಗೆ ಅಪಮಾನ – ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಧಾರ್ಮಿಕ ಸಂಸ್ಥೆಗಳ ಮಹಾಸಂಘದಿಂದ ಮನವಿ

0

ಪುತ್ತೂರು: ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಅಪಮಾನ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಸಂಘದಿಂದ ಪುತ್ತೂರು ಸಹಾಯಕ ಕಮೀಷನರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಪ್ರದಾಯದಂತೆ ಅಂಧಕಾಸುರ ಸಂಹಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದುಷ್ಕರ್ಮಿಗಳೂ ಉತ್ಸವ ಮೂರ್ತಿಯನ್ನು ಅಪವಿತ್ರಗೊಳಿಸಿದ್ದರು. ಈ ಘಟನೆಯನ್ನು ಖಂಡಿಸಿ ಭಕ್ತರು ಮತ್ತು ಸ್ಥಳೀಯರು ಪ್ರತಿಭಟನೆ ಮಾಡಿದ್ದಾರೆ. ಆದರೆ ಪೊಲೀಸರು ಅಪರಾಧಿಗಳನ್ನು ಬಂಧನ ಮಾಡುವ ಬದಲು ಶಾಂತಿಯುತ ಪ್ರತಿಭಟನೆ ಮಾಡಿದ ಭಕ್ತರ ಮೇಲೆ ದೂರು ದಾಖಲು ಮಾಡಿರುವುದು ಖಂಡನೀಯ. ಈ ಕುರಿತು ಸರಕಾರ ಎಚ್ಚೆತ್ತು ಉತ್ಸವಕ್ಕೆ ಅಡ್ಡಿಪಡಿಸಿದ ಅಪರಾಧಿಗಳನ್ನು ಕೂಡಲೆ ಬಂಧನ ಮಾಡಿ ಅವರಿಗೆ ಶಿಕ್ಷೆ ವಿಧಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ. ಮನವಿ ನಿಯೋಗದಲ್ಲಿ ಬಾಲಚಂದ್ರ ಸೊರಕೆ, ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ್, ಪ್ರಸಾದ್ ಬೆಟ್ಟ, ಶ್ರೀಧರ್ ಬನ್ನೂರು, ಜಗದೀಶ್ ಶೆಟ್ಟಿ ಪುತ್ತೂರು ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here