ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಹರಿಕಿರಣ್‌ರಿಗೆ ಮುಖ್ಯಶಿಕ್ಷಕರಾಗಿ ಭಡ್ತಿ-ಸರಳಿಕಟ್ಟೆ ಪ್ರೌಢಶಾಲೆಗೆ ವರ್ಗಾವಣೆ

0

ಉಪ್ಪಿನಂಗಡಿ: ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಭಾರ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹರಿಕಿರಣ್ ಕೊಯಿಲ ಅವರು ಮುಖ್ಯಶಿಕ್ಷಕರಾಗಿ ಭಡ್ತಿಗೊಂಡಿದ್ದು ಬೆಳ್ತಂಗಡಿ ತಾಲೂಕಿನ ಸರಳಿಕಟ್ಟೆ ಸರಕಾರಿ ಪ್ರೌಢಶಾಲೆಗೆ ವರ್ಗಾವಣೆ ಆದೇಶವಾಗಿದೆ.


ಹರಿಕಿರಣ್ ಅವರು 1996ರಲ್ಲಿ ಬೆಳ್ತಂಗಡಿ ತಾಲೂಕಿನ ಕರಾಯ ಸರಕಾರಿ ಪ್ರೌಢಶಾಲೆಯಲ್ಲಿ ಗಣಿತ ಶಿಕ್ಷಕರಾಗಿ ಸರಕಾರಿ ಸೇವೆಗೆ ಸೇರ್ಪಡೆಗೊಂಡಿದ್ದರು. ಆ ಬಳಿಕ 2001ರಿಂದ 2011ರ ತನಕ ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪಂಜ ವೃತ್ತದ ಶಿಕ್ಷಣ ಸಂಯೋಜಕರಾಗಿ, 2011ರಿಂದ 2014ರ ತನಕ ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಇಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿದ್ದರು. 2014ರಲ್ಲಿ ಹಿರೇ ಬಂಡಾಡಿ ಸರಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡು ಬಂದಿದ್ದರು. ಇಲ್ಲಿ 2023ರ ಮೇ ತಿಂಗಳಿನಿಂದ ಪ್ರಭಾರ ಮುಖ್ಯಶಿಕ್ಷಕರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಅಕ್ಟೋಬರ್ ತಿಂಗಳಿನಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ಕ್ರೀಡಾಕೂಟವನ್ನು ಹಿರೇಬಂಡಾಡಿ ಸರಕಾರಿ ಪ್ರೌಢಶಾಲೆಯ ಆತಿಥ್ಯದಲ್ಲಿ ಯಶಸ್ವಿಯಾಗಿ ಸಂಘಟಿಸುವಲ್ಲಿ ಹರಿಕಿರಣ್‌ರವರು ಪ್ರಮುಖ ಪಾತ್ರವಹಿಸಿದ್ದರು. ಇವರು ಉಪ್ಪಿನಂಗಡಿ ಗ್ರಾಮದ ಪಾದಾಳ ಎಂಬಲ್ಲಿ ಪತ್ನಿ, ಮಕ್ಕಳ ಜೊತೆ ವಾಸ್ತವ್ಯವಿದ್ದಾರೆ.

LEAVE A REPLY

Please enter your comment!
Please enter your name here