ಕ್ರಿಕೆಟ್ ಪಂದ್ಯಾಟ: ಪಾಂಗಳಾಯಿ ಬೆಥನಿ ಪ್ರೌಢಶಾಲಾ ಕ್ರಿಸ್‌ ಎಂಜಿಲೊ ಪಿಂಟೋ ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ತಂಡದ ನಾಯಕತ್ವ ವಹಿಸಿ ಉತ್ತಮ ಪ್ರದರ್ಶನ ನೀಡಿದ್ದ ದರ್ಬೆ ಪಾಂಗಾಳಾಯ ಬೆಥನಿ ಪ್ರೌಢ ಶಾಲಾ 8ನೇ ತರಗತಿಯ ಕ್ರಿಸ್ ಎಂಜೆಲೊ ಪಿಂಟೊರವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಳೆದ ಶೈಕ್ಷಣಿಕ ವರ್ಷದ ಕ್ರಿಕೆಟ್ ಪಂದ್ಯಾಟದಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದರು. ಪ್ರಸ್ತುತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧಿಕೃತ ಸದಸ್ಯ ಆಟಗಾರನಾಗಿರುವ ಕ್ರಿಸ್ ಎಂಜೆಲೊ ಪಿಂಟೋರವರು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಯನ್ನು ಒಳಗೊಂಡ ಜಿಲ್ಲೆಯ ನಾಯಕರಾಗಿ ಆಯ್ಕೆಯಾಗಿದ್ದಾರೆ. ಜ.4ರಂದು ಬೆಂಗಳೂರಿನ ಆಲೂರಿನಲ್ಲಿ ನಡೆಯುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ. ಇವರು ಸಂತ ಫಿಲೋಮಿನಾ ಪದವಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಎಲಿಯಾಸ್ ಪಿಂಟೊ ಹಾಗೂ ಸಂತ ಫಿಲೋಮಿನಾ ಪ್ರೌಢ ಶಾಲೆಯ ಶಿಕ್ಷಕಿ ಮೋಲಿ ಪಿಂಟೊರವರ ಪುತ್ರ.

LEAVE A REPLY

Please enter your comment!
Please enter your name here