ಬೆಟ್ಟಂಪಾಡಿ: ಇಲ್ಲಿನ ವಿನಾಯಕನಗರ ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಪುನರ್‌ನಿರ್ಮಾಣದ ಶಿಲಾನ್ಯಾಸ ಸಮಾರಂಭ ದ. 4 ರಂದು ನಡೆಯಲಿದೆ. ವೇ.ಮೂ. ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ.
ಸರ್ವೆ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದ ವ್ಯವಸ್ಥಾಪಕ ಡಾ| ಸೀತಾರಾಮ ಭಟ್ ಕಲ್ಲಮ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂದಿರದ ಮಾಜಿ ಅಧ್ಯಕ್ಷ ಗಣಪತಿ ಭಟ್ ಕಕ್ಕೂರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಟ್ಟಂಪಾಡಿ ಗ್ರಾ.ಪಂ. ಅಧ್ಯಕ್ಷೆ ವಿದ್ಯಾಶ್ರೀ ಸರಳಿಕಾನ, ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ, ಇರ್ದೆ ಶ್ರೀ ವಿಷ್ಣಮೂರ್ತಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ನಿಡ್ಪಳ್ಳಿ ಶ್ರೀಶಾಂತಾದುರ್ಗಾ ದೇವಸ್ಥಾನದ ಅಧ್ಯಕ್ಷ ನಾರಾಯಣ ರೈ ಕೊಪ್ಪಳ, ಕುರಿಯ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಮಾಜಿ ಅಧ್ಯಕ್ಷ ಜಯರಾಮ ರೈ ನುಳಿಯಾಲು, ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹಿರಿಯ ಅರ್ಚಕ ದಿವಾಕರ ಭಟ್ ಕಾನುಮೂಲೆ, ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು, ಪಾಣಾಜೆ ಪ್ರಾ.ಕೃ.ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್, ಬೆಳಿಯೂರುಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹರಿಪ್ರಕಾಶ್ ಬೈಲಾಡಿ, ಮಂಗಳೂರು ವಳಚ್ಚಿಲ್ ಶ್ರೀನಿವಾಸ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಸತೀಶ್ ಕುಮಾರ್ ಕೂವೆಂಜ, ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಶಿವಪ್ಪ ಪೂಜಾರಿ ನುಳಿಯಾಲು, ಪುತ್ತೂರು ನೇತ್ರಾವತಿ ಸ್ತ್ರೀಶಕ್ತಿ ಸಹಕಾರ ಸಂಘದ ಅಧ್ಯಕ್ಷೆ ಮೀನಾಕ್ಷಿ ಮಂಜುನಾಥ್, ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಮಣಿಯಾಣಿ ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀ ಸಿದ್ಧಿವಿನಾಯಕ ಸೇವಾ ಸಂಘ ಮತ್ತು ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ಪುನರ್‌ನಿರ್ಮಾಣ ಸಮಿತಿ ಪದಾಧಿಕಾರಿಗಳು ತಿಳಿಸಿರುತ್ತಾರೆ.
40 ಲಕ್ಷ ರೂ. ವೆಚ್ಚದಲ್ಲಿ ಭಜನಾ ಮಂದಿರ ನಿರ್ಮಾಣ
ಈಗ ಇರುವ ಮಂದಿರದ ಕಟ್ಟಡವನ್ನೂ ಸಂಪೂರ್ಣ ಕೆಡವಿ ಬಾಲಾಲಯದಲ್ಲಿ ಭಜನಾ ಸೇವೆ ನಡೆಯುತ್ತಿದೆ. ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ಹೊಸ ಮಂದಿರ ಕಟ್ಟಡ ನಿರ್ಮಿಸುವ ಯೋಜನೆ ಹಾಕಿಕೊಳ್ಳಲಾಗಿದೆ.