ಪುತ್ತೂರು:ಶಾಲಾ ಶಿಕ್ಷಣ ಇಲಾಖೆಯ ಮೈಸೂರು ವಿಭಾಗದ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವ ಸರಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದದ ಶಿಕ್ಷಕರಿಗೆ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ಉಪಪ್ರಾಂಶುಪಾಲರ ವೃಂದದ ಹುದ್ದೆಗಳಿಗೆ ಭಡ್ತಿ ನೀಡಿ ಸ್ಥಳ ನಿಯುಕ್ತಿಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಜಂಟಿ ಆಯುಕ್ತ ವಿಜಯ ಈ ರವಿಕುಮಾರ್ ಆದೇಶಿಸಿದ್ದು ಪುತ್ತೂರು ಹಾಗೂ ಕಡಬ ತಾಲೂಕಿನ ಏಳು ಮಂದಿ ಸಹ ಶಿಕ್ಷಕರು ಮುಖ್ಯ ಶಿಕ್ಷಕರಾಗಿ ಮುಂಭಡ್ತಿ ಪಡೆದು ವರ್ಗಾವಣೆಗೊಂಡಿದ್ದಾರೆ.
ಹಿರೇಬಂಡಾಡಿ ಸರಕಾರಿ ಪ್ರೌಢಶಾಲಾ ಹರಿಕಿರಣ್ ಕೆ. ಬೆಳ್ತಂಗಡಿ ತಾಲೂಕಿನ ಸರಳಿಕಟ್ಟೆ ಸರಕಾರಿ ಪ್ರೌಢಶಾಲೆಗೆ, ಉಪ್ಪಿನಂಗಡಿ ಸರಕಾರಿ ಪ.ಪೂ ಕಾಲೇಜು ಪ್ರೌಢಶಾಲಾ ವಿಭಾಗದ ಶ್ರೀಧರ ಭಟ್ ಹಿರೆಬಂಡಾಡಿ ಸರಕಾರಿ ಪ್ರೌಢಶಾಲೆಗೆ, ಕಡಬ ತಾಲೂಕಿನ ಕೊಣಾಲು ಸರಕಾರಿ ಪ್ರೌಢಶಾಲಾ ಅಬ್ದುಲ್ ಖಾದರ್ ಎಡಮಂಗಲ ಸರಕಾರಿ ಪ್ರೌಢಶಾಲೆ, ಕೊಣಾಲು ಸರಕಾರಿ ಪ್ರೌಢಶಾಲಾ ಶಿವಕುಮಾರ್ ಎನ್.ಜಿ ಮಂಜುನಾಥ ನಗರ ಸರಕಾರಿ ಪ್ರೌಢಶಾಲೆಗೆ, ಕೊಣಾಲು ಸರಕಾರಿ ಪ್ರೌಢಶಾಲಾ ಸತೀಶ್ಚಂದ್ರ ಬಜತ್ತೂರು ವಳಾಲು ಸರಕಾರಿ ಪ್ರೌಢಶಾಲೆಗೆ, ಪುತ್ತೂರು ನಗರದ ಡಾ| ಕೆ ಶಿವರಾಮ ಕಾರಂತ ಸರಕಾರಿ ಪ್ರೌಢಶಾಲಾ ಅನ್ನಮ್ಮ ಪಿ.ಎಸ್ ಇರ್ದೆ -ಉಪ್ಪಳಿಗೆ ಸರಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಽಕಾರಿ ಕಚೇರಿಯಲ್ಲಿ ಶಿಕ್ಷಣ ಸಂಯೋಜಕರಾಗಿದ್ದ ನಳಿನಿ ಮುಖ್ಯ ಶಿಕ್ಷಕರಾಗಿ ಭಡ್ತಿ ಪಡೆದು ಮಣಿಕ್ಕರ ಸರಕಾರಿ ಪ್ರೌಢಶಾಲೆಗೆ ವರ್ಗಾವಣೆಗೊಂಡಿದ್ದಾರೆ. ಉಪ್ಪಿನಂಗಡಿ ಸರಕಾರಿ ಪ್ರೌಢಶಾಲೆಯ ಶೋಭಾ ಮುಂಭಡ್ತಿ ಪಡೆದು ಅದೇ ಶಾಲೆಯಲ್ಲಿ ಮುಖ್ಯಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಆ ಮೂಲಕ ಪುತ್ತೂರು ಹಾಗೂ ಕಡಬ ತಾಲೂಕಿನಲ್ಲಿ ಖಾಲಿಯಿದ್ದ 7 ಮುಖ್ಯ ಶಿಕ್ಷಕರ ಹುದ್ದೆಗಳ ಪೈಕಿ 6 ಸ್ಥಾನಗಳು ಭರ್ತಿಯಾಗಿದೆ.
ಕೊಣಾಲು ಒಂದೇ ಶಾಲೆಯಿಂದ ಮೂರು ಮಂದಿ ಸಹ ಶಿಕ್ಷಕರು ಮುಖ್ಯ ಶಿಕ್ಷಕರಾಗಿ ಭಡ್ತಿಗೊಂಡು ವಿವಿಧ ಶಾಲೆಗೆ ವರ್ಗಾವಣೆಗೊಂಡಿದ್ದಾರೆ.