ಜ.7: ಆಲಂಕಾರು ವಲಯ ಒಕ್ಕಲಿಗ ಗೌಡರ ’ಕ್ರೀಡಾ ಸಂಭ್ರಮ’

0

ಕಡಬ: ಆಲಂಕಾರು ವಲಯ ಒಕ್ಕಲಿಗ ಗೌಡ ಸೇವಾ ಸಂಘದ ’ಕ್ರೀಡಾ ಸಂಭ್ರಮ 2023-24’ ಜ.7ರಂದು ಆಲಂಕಾರು ಶ್ರೀ ದುರ್ಗಾಂಬಾ ಮೈದಾನದಲ್ಲಿ ನಡೆಯಲಿದೆ. ಪೂರ್ವಾಹ್ನ 8.30ಕ್ಕೆ ನಿವೃತ್ತ ಅಧ್ಯಾಪಕ ಗುಮ್ಮಣ್ಣ ಗೌಡ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಬಳಿಕ ಕ್ರೀಡಾಕೂಟವನ್ನು ಮಾಜಿ ಶಾಸಕ ಸಂಜೀವ ಮಠಂದೂರು ಅವರು ಉದ್ಘಾಟಿಸಲಿದ್ದಾರೆ.

ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ರಾಮಣ್ಣ ಗೌಡ ದೋಳ ನೆಕ್ಕರೆ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ.ರಾಮಕೃಷ್ಣ, ನಿರ್ದೇಶಕಿ ತೇಜಸ್ವಿನಿಶೇಖರ ಗೌಡ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಸುರೇಶ್ ಬೈಲು, ಪುತ್ತೂರು ಎವಿಜಿ ಆಂಗ್ಲಮಾಧ್ಯಮ ಶಾಲೆಯ ಸಂಚಾಲಕ ಎ.ವಿ.ನಾರಾಯಣ, ನೋಟರಿ ನ್ಯಾಯವಾದಿ ಸುಂದರ ಗೌಡ ನೆಕ್ಕಿಲಾಡಿ, ವಿಜಯ ಬ್ಯಾಂಕ್ ನಿವೃತ್ತ ಮೇನೇಜರ್ ಬಾಲಕೃಷ್ಣ ಕತ್ಲಡ್ಕ ಭಾಗವಹಿಸಲಿದ್ದಾರೆ. ಸನ್ಮಾನ: ಕಾರ್ಯಕ್ರಮದಲ್ಲಿ ಲಿಂಗಪ್ಪ ಗೌಡ ಕಡೆಂಬ್ಯಾಳ್, ನಾಗಪ್ಪ ಗೌಡ ಮರುವಂತಿಲ, ಈಶ್ವರ ಗೌಡ ಪಜ್ಜಡ್ಕ, ಪದ್ಮಪ್ಪ ಗೌಡ ರಾಮಕುಂಜ, ಮಹಾಬಲ ಕಕ್ವೆ, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹರೀಶ್ ಕೋಡ್ಲ ಅವರಿಗೆ ಸನ್ಮಾನ ನಡೆಯಲಿದೆ.

ಸಮಾರೋಪ:
ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು ಆಲಂಕಾರು ವಲಯ ಹಿರಿಯ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಸುರುಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕಡಬ ತಾಲೂಕು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಪೂರ್ಣೇಶ್ ಬಲ್ಯ, ಶರವೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ದಾಮೋದರ ಗೌಡ ಕಕ್ವೆ, ಪ್ರಗತಿಪರ ಕೃಷಿಕ ಪ್ರವೀಣ್ ಕುಂಟ್ಯಾನ, ಆಲಂಕಾರು ವಲಯ ಯುವ ಒಕ್ಕಲಿಗ ಗೌಡ ಸಂಘದ ಗೌರವಾಧ್ಯಕ್ಷ ಚಕ್ರಪಾಣಿ ಬಾಕಿಲ, ಆಲಂಕಾರು ವಲಯ ಮಹಿಳಾ ಸಮಿತಿ ಅಧ್ಯಕ್ಷೆ ಜಯಶ್ರೀಅಶೋಕ್ ಗೌಡ ಪಜ್ಜಡ್ಕ, ಕಡಬ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯ ಉಪಾಧ್ಯಕ್ಷ ದಯಾನಂದ ಗೌಡ ಆಲಡ್ಕ, ಆಲಂಕಾರು ಗ್ರಾ.ಪಂ.ಅಧ್ಯಕ್ಷೆ ಸುಶೀಲಶೀನಪ್ಪ ಗೌಡ ಕೊಂಡಾಡಿ, ಪೆರಾಬೆ ಗ್ರಾ.ಪಂ.ಅಧ್ಯಕ್ಷೆ ಸಂಧ್ಯಾ ಕೆದ್ದೊಟೆ, ರಾಮಕುಂಜ ಗ್ರಾ.ಪಂ.ಮಾಜಿ ಅಧ್ಯಕ್ಷ ಪ್ರಶಾಂತ್ ಆರ್.ಕೆ.,ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಸ್ಪರ್ಧೆಗಳ ವಿವರ:
6 ವರ್ಷದ ಕೆಳಗಿನ ಅಂಗನವಾಡಿಯ ಮಕ್ಕಳಿಗೆ ಕಪ್ಪೆ ಜಿಗಿತ, ಕಲರ್ ಬಾಕ್ಸ್ ಹೆಕ್ಕುವುದು, 1ರಿಂದ 4ನೇ ತರಗತಿಯ ಮಕ್ಕಳಿಗೆ 100 ಮೀ.ಓಟ ಮತ್ತು ಬಕೆಟ್‌ಗೆ ಬಾಲ್ ಹಾಕುವುದು, 5ರಿಂದ 7ನೇ ತರಗತಿಯ ಮಕ್ಕಳಿಗೆ 200 ಮೀ.ಓಟ ಮತ್ತು ಶಟಲ್ ರಿಲೆ(4ಜನ), 8ರಿಂದ 10ನೇ ತರಗತಿ ಮಕ್ಕಳಿಗೆ 100 ಮೀ., ಹಾಗೂ 200 ಮೀ.ಓಟ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಗಳು ಹುಡುಗರು ಹಾಗೂ ಹುಡುಗಿಯರಿಗೆ ಪ್ರತ್ಯೇಕವಾಗಿ ನಡೆಯಲಿದೆ. ಮಹಿಳೆಯರಿಗೆ ಹಗ್ಗಜಗ್ಗಾಟ, ತ್ರೋಬಾಲ್, ಕಬಡ್ಡಿ, ಪುರುಷರಿಗೆ ಹಗ್ಗಜಗ್ಗಾಟ, ವಾಲಿಬಾಲ್, ಕಬಡ್ಡಿ ಪಂದ್ಯಾಟ ನಡೆಯಲಿದೆ. 45ರಿಂದ 60ವರ್ಷದ ಪುರುಷರಿಗೆ ಮತ್ತು ಮಹಿಳೆಯರಿಗೆ ವೇಗದ ನಡಿಗೆ, ಗುಂಡು ಎಸೆತ, 60ವರ್ಷ ಮೇಲ್ಪಟ್ಟ ಪುರುಷರಿಗೆ ಮತ್ತು ಮಹಿಳೆಯರಿಗೆ ವೇಗದ ನಡಿಗೆ, ಗುಂಡು ಎಸೆತ ಸ್ಪರ್ಧೆ ನಡೆಯಲಿದೆ.

LEAVE A REPLY

Please enter your comment!
Please enter your name here