ಮುಂಬರುವ ಚುನಾವಣಾ ಹಿನ್ನೆಲೆ -ಕಾಂಗ್ರೆಸ್‌ ನಿಂದ ವೀಕ್ಷಕರ ನೇಮಕ

0

ಪುತ್ತೂರು: ಮುಂಬರುವ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಚುನಾವಣೆ, ಜಿ.ಪಂ.,ತಾ.ಪಂ.ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷ ವಿವಿಧ ಕ್ಷೇತ್ರಗಳಿಗೆ ವೀಕ್ಷಕರ ನೇಮಕಾತಿ ಮಾಡಿದೆ. ಸುಳ್ಯ ವಿಧಾನಸಭಾ ಕ್ಷೇತ್ರದ ವೀಕ್ಷಕರಾಗಿ ನ್ಯಾಯವಾದಿ ಕುಂಬ್ರ ದುರ್ಗಾಪ್ರಸಾದ್ ರೈ ಅವರನ್ನು ನೇಮಿಸಲಾಗಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ನ್ಯಾಯವಾದಿ, ನೋಟರಿಯೂ ಆಗಿರುವ ಭಾಸ್ಕರ ಕೋಡಿಂಬಾಳ ಅವರನ್ನು ನೇಮಿಸಲಾಗಿದೆ. ಕಡಬ ಬ್ಲಾಕ್ ಕಾಂಗ್ರೆಸ್ ವೀಕ್ಷಕರಾಗಿ ಉಮಾನಾಥ ಶೆಟ್ಟಿ ಪೆರ್ನೆ ಅವರನ್ನು ನೇಮಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮುಂಬರುವ ಜಿಲ್ಲಾ ಪಂಚಾಯತ್‌, ತಾಲೂಕು ಪಂ. ಪದವೀಧರ ಶಿಕ್ಷಕರ ಕ್ಷೇತ್ರ ಮತ್ತು ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

LEAVE A REPLY

Please enter your comment!
Please enter your name here