ಪುತ್ತೂರು: ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಹೈಯರ್ ಗ್ರೇಡ್ ವಿಭಾಗದಲ್ಲಿ ಒಟ್ಟು 30 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದರಲ್ಲಿ 17 ವಿದ್ಯಾರ್ಥಿಗಳು ಅತ್ಯುತ್ತಮ( ಡಿಸ್ಟಿಂಕ್ಷನ್ ) ಶ್ರೇಣಿಯಲ್ಲಿ, 12 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಲೋವರ್ ಗ್ರೇಡ್ ವಿಭಾಗದಲ್ಲಿ ಒಟ್ಟು 23 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಅತ್ಯುತ್ತಮ ( ಡಿಸ್ಟಿಂಕ್ಷನ್ ) ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕ ಕಾರ್ತಿಕ್ ಕುಮಾರ್,ಪವಿತ್ರ ಮತ್ತು ಶ್ರೀನಿಧಿ ಇವರು ತರಬೇತಿ ನೀಡಿರುತ್ತಾರೆ ಎಂದು ಶಾಲಾ ಮುಖ್ಯ ಗುರುಗಳು ತಿಳಿಸಿರುತ್ತಾರೆ.
Home ಇತ್ತೀಚಿನ ಸುದ್ದಿಗಳು ಡ್ರಾಯಿಂಗ್ ಪರೀಕ್ಷೆ- ವಿವೇಕಾನಂದ ಆ.ಮಾಧ್ಯಮ ಶಾಲೆ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ ತೇರ್ಗಡೆ