ಪುತ್ತೂರು: ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಹಾಗೂ ಆರೋಗ್ಯ ರಕ್ಷಾ ಸಮಿತಿ ಸಂಪ್ಯ ಇದರ ಆಶ್ರಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ಪ್ರತಿ ತಿಂಗಳು ನಡೆಯುವ ಉಚಿತ ವೈದ್ಯಕೀಯ ಶಿಬಿರದ 22ನೇ ತಿಂಗಳ ವೈದ್ಯಕೀಯ ಶಿಬಿರವು ಜ.7ರಂದು ನಡೆಯಲಿದೆ.
ಪ್ರಥಮ ಚಿಕಿತ್ಸೆಯ ಮಾಹಿತಿ:
ಈ ಬಾರಿಯ ಶಿಬಿರದಲ್ಲಿ ವಿಶೇಷವಾಗಿ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ಮಾಹಿತಿ, ಹೃದಯಾಘಾತ, ವಿಷ ಸೇವನೆ ಮತ್ತು ನೀರಿನಲ್ಲಿ ಮುಳುಗಿದ ಸಂದರ್ಭದಲ್ಲಿ ನೀಡಬೇಕಾದ ಪ್ರಥಮ ಚಿಕಿತ್ಸೆ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಶ್ವಾಸಕೋಶ ತಕ್ಷ ಡಾ. ಪ್ರೀತಿರಾಜ್ ಬಲ್ಲಾಳ್ರವರು ನೀಡಲಿದ್ದಾರೆ.
ಶಿಬಿರದಲ್ಲಿ ತಜ್ಞರಿಂದ ಸಾಮಾನ್ಯ ವೈದ್ಯಕೀಯ ತಪಾಸಣೆ, ಕೀಲು ಮತ್ತು ಎಲುಬು ತಪಾಸಣೆ, ಶ್ವಾಸಕೋಶ ತಪಾಸಣೆ, ಆಯುರ್ವೇದ ವೈದ್ಯಕೀಯ ತಪಾಸಣೆ, ಇಸಿಜಿ, ಮಧುಮೇಹ ರಕ್ತಪರೀಕ್ಷೆ ಹಾಗೂ ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುವುದು. ತಜ್ಞ ವೈದ್ಯ ಡಾ.ಸುರೇಶ್ ಪುತ್ತೂರಾಯ, ಎಲುಬು ಮತ್ತು ಕೀಲು ತಜ್ಞ ಡಾ. ಸಚಿನ್ ಶಂಕರ್ ಹಾರಕೆರೆ. ಶ್ವಾಸಕೊಶ ತಜ್ಞ ಡಾ.ಪ್ರೀತಿರಾಜ್ ಬಲ್ಲಾಳ್, ಆಯುರ್ವೇದ ತಜ್ಞರಾದ ಡಾ. ಸಾಯಿ ಪ್ರಕಾಶ್ ಹಾಗೂ ಡಾ.ಗ್ರೀಷ್ಮಾ ಶಿಬಿರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿಕೊಡಲಿದ್ದಾರೆ. ಶಿಬಿರವು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ತನಕ ನಡೆಯಲಿದೆ. ಭಕ್ತಾದಿಗಳು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ದೇವಸ್ಥಾನ ಹಾಗೂ ಆರೋಗ್ಯ ರಕ್ಷಾ ಸಮಿತಿ ಪ್ರಕಟಣೆ ತಿಳಿಸಿದೆ.