ಜ.7: ಭಾರತೀಯ ನೃತ್ಯ ಕಲಾ ಶಾಲೆಯ ವಾರ್ಷಿಕೋತ್ಸವ, ಅಭಿನಂದನೆ

0

ಪುತ್ತೂರು: ಭಾರತೀಯ ನೃತ್ಯ ಕಲಾ ಶಾಲೆಯ 25ನೇ ವಾರ್ಷಿಕೋತ್ಸವ ಸಮಾರಂಭ ಜ.7ರಂದು ಸಂಜೆ 4ರಿಂದ ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿದೆ. ಪುತ್ತೂರು ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ.ಸುರೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ ಮುಳಿಯ, ನಾಟ್ಯ ವಿದುಷಿ ಡಾ|ಲಿಖಿತಾ ಯಜ್ಞೇಶ್ ರಾವ್, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಅಸಿಸ್ಟೆಂಟ್ ಪ್ರೊಫೆಸರ್ ಲತಾ ಮೋಹನ್ ಶೆಟ್ಟಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಸಭಾ ಕಾರ್ಯಕ್ರಮ ಬಳಿಕ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here