ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಅಧೀನದಲ್ಲಿರುವ ಕ್ರಿಶ್ಚಿಯನ್ ಲೈಫ್ ಕಮ್ಯೂನಿಟಿ(ಸಿಎಲ್‌ಸಿ) ಸಂಸ್ಥೆಯ ವತಿಯಿಂದ ‘ಒಗ್ಗಟ್ಟಿಗಾಗಿ ಕ್ರೀಡೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ವರ್ಷಂಪ್ರತಿ ಹಮ್ಮಿಕೊಳ್ಳುವ ಮೊ|ಆಂಟನಿ ಪತ್ರಾವೋ ಸ್ಮರಣಾರ್ಥ 31ನೇ ವರ್ಷದ ಅಂತರ್-ವಾಳೆ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಜ.7 ರಂದು ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಕ್ರೀಡಾಂಗಣದಲ್ಲಿ ಜರಗಲಿದೆ.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಿಎಲ್‌ಸಿ ಸಂಸ್ಥೆಯ ಆತ್ಮೀಕ ನಿರ್ದೇಶಕರೂ, ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ವಂ|ಲಾರೆನ್ಸ್ ಮಸ್ಕರೇನ್ಹಸ್‌ರವರು ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಸೇಡಿಯಾಪು ಕೋಸ್ಟಲ್ ಕೊಕೊನಟ್ ಇಂಡಸ್ಟ್ರೀ ಮಾಲಕ ಡೆನ್ನಿಸ್ ಮಸ್ಕರೇನ್ಹಸ್ ಸೇಡಿಯಾಪುರವರು ಭಾಗವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಂತ ಫಿಲೋಮಿನಾ ಕಾಲೇಜಿನ ಪುರುಷರ ವಸತಿನಿಲಯದ ವಾರ್ಡನ್ ವಂ|ರೂಪೇಶ್ ತಾವ್ರೋರವರು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ.
ಮಾದೆ ದೇವುಸ್ ಚರ್ಚ್ ವ್ಯಾಪ್ತಿಯ 19 ವಾಳೆಗಳಾದ ವಾಳೆಗಳಾದ ಬಲ್ನಾಡು, ದರ್ಬೆ, ಗುಂಡ್ಯಡ್ಕ, ಹಾರಾಡಿ, ಕಲ್ಲಾರೆ, ಪದವು, ಪಾಂಗ್ಲಾಯಿ, ಪರ್ಲಡ್ಕ, ನಿತ್ಯಾಧರ್, ಪುತ್ತೂರು, ರೋಟರಿಪುರ, ಸಾಲ್ಮರ, ಸಾಮೆತ್ತಡ್ಕ, ಸಂಟ್ಯಾರು, ಶಿಂಗಾಣಿ, ತೆಂಕಿಲ, ಮೊಟ್ಟೆತ್ತಡ್ಕ, ಬಪ್ಪಳಿಗೆ, ಮಿತ್ತೂರು ವಾಳೆ ತಂಡಗಳು ಪಂದ್ಯಾಟದಲ್ಲಿ ಭಾಗವಹಿಸುತ್ತಿದೆ ಎಂದು ಸಿಎಲ್‌ಸಿ ಸಂಸ್ಥೆಯ ಅಧ್ಯಕ್ಷ ಎಲ್ಯಾಸ್ ಪಿಂಟೋ, ಕಾರ್ಯದರ್ಶಿ ರುಡೋಲ್ಫ್ ಪಿಂಟೋ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಸ್ಟ್ಯಾನಿ ಪ್ರವೀಣ್ ಮಸ್ಕರೇನ್ಹಸ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.