ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಮಾಸಿಕ ಸಭೆ

0

ಪುತ್ತೂರು: ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಮಾಸಿಕ ಸಭೆಯು ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅಧ್ಯಕ್ಷತೆಯಲ್ಲಿ ನಡೆಯಿತು.

ಶಾಸಕ ಅಶೋಕ್‌ ರೈ ಮಾತನಾಡಿ ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಕೇಂದ್ರಕ್ಕೆ ತಲಾ 20 ಲಕ್ಷ ಅನುದಾನವನ್ನು ಹೆಚ್ಚುವರಿಯಾಗಿ ನೀಡುವುದಾಗಿ ಘೋಷಿಸಿದರು.
ಪ್ರತೀ ವಲಯಾಧ್ಯಕ್ಷರುಗಳ ಮೂಲಕ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯಲಿದೆ. ಗ್ರಾಮದಲ್ಲಿ ಅಗತ್ಯವಾಗಿ ಆಗಬೇಕಾದ ಕಾಮಗಾರಿಯನ್ನು ಮಾಡಲು ಈ ಅನುದಾನವನ್ನು ಬಳಕೆ ಮಾಡಲಾಗುತ್ತದೆ. ಪ್ರತೀ ಗ್ರಾಮಗಳಿಗೂ ಸಮಾನ ರೀತಿಯಲ್ಲಿ ಅನುದಾನವನ್ನು ವಿತರಣೆ ಮಾಡಲಾಗುತ್ತದೆ.
ಕಾರ್ಯಕರ್ತರು ಯಾವುದೇ ಸಮಸ್ಯೆ ಇದ್ದರೂ ಶಾಸಕರ ಕಚೇರಿಗೆ ಬನ್ನಿ. ಪಕ್ಷ ಕಟ್ಟುವಲ್ಲಿ ಆಗಿರುವ ಸಮಸ್ಯೆಗಳನ್ನು ನನ್ನ ಗಮನಕ್ಕೆ ತನ್ನಿ. ಪಕ್ಷ ಕಟ್ಟಲು ಏನು ಸಹಕಾರ ಬೇಕು‌ ಎಂಬುದನ್ನು ನೇರವಾಗಿ ತಿಳಿಸಿ. ಸರಕಾರದ ಗ್ಯಾರಂಟಿ ಯೋಜನೆಗಳು ಪ್ರತೀ ಮನೆಗೂ ತಲುಪುವಂತೆ ಕಾರ್ಯಕರ್ತರು ನೋಡಿಕೊಳ್ಳಬೇಕು. ಗೃಹಲಕ್ಷ್ಮಿ ಯಾರಿಗೆ ಬಂದಿಲ್ಲವೋ ಅಂಥವರಿಗೆ ತಲುಪಿಸುವ ವ್ಯವಸ್ಥೆಯನ್ನು ಕಾರ್ಯಕರ್ತರು ಮಾಡಬೇಕು. ಪಕ್ಷದ ಬಲವರ್ಧನೆಗೆ ಗ್ಯಾರಂಟಿ ಯೋಜನೆಗಳು, ಅಕ್ರಮ ಸಕ್ರಮ, 94 ಸಿ ಮತ್ತು ಸಿ ಸಿ ವಿತರಣೆಯಲ್ಲಿ ಯಾವುದೇ ರಾಜಕೀಯ ಮಾಡಿಲ್ಲ. ಅರ್ಹ ಎಲ್ಲರಿಗೂ ಹಕ್ಕು‌ಪತ್ರವನ್ನು ನೀಡಲಾಗಿದೆ ಎಂದು‌ ಶಾಸಕರು ತಿಳಿಸಿದರು.

ಕಾರ್ಯಕರ್ತರ ಮೂಲಕವೇ ಅಭಿವೃದ್ದಿ ಕೆಲಸ
ಕಾರ್ಯಕರ್ತರ ಮೂಲಕವೇ ಕ್ಷೇತ್ರದಲ್ಲಿ‌ ಅಭಿವೃದ್ದಿ ಕಾರ್ಯಗಳು ನಡೆಯುತ್ತದೆ. ವಿವಿಧ ತಂಡಗಳನ್ನು‌ ಮಾಡಿ ಎಲ್ಲಾ ಗ್ರಾಮದಲ್ಲಿ ಬೂತ್ ಮತ್ತು ಮಹಿಳಾ ತಂಡವನ್ನು ಕಟ್ಟುವ ಕೆಲಸ ಆಗಬೇಕು ಎಂದು ಹೇಳಿದ ಶಾಸಕರು ಕಾರ್ಯಕರ್ತರೇ ಪಕ್ಷದ ಆಧಾರ ಸ್ತಂಬವಾಗಿದೆ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಮಾತನಾಡಿ ಪಕ್ಷದ ಬಲವರ್ಧನೆಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.
ವಲಯ ಹಾಗೂ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಬಗ್ಗೆ ಮಾಹಿತಿ ನೀಡಿದರು. ತಿಂಗಳಲ್ಲಿ ಎರಡು ದಿನ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕರು ಅಹವಾಲು ಸ್ವೀಕರಿಸಬೇಕು. ಕಾರ್ಯಕರ್ತರ ಭಾವನೆಗೆ ಧಕ್ಕೆ‌ ತರುವ ಕೆಲಸವನ್ನು ಯಾರೂ ಮಾಡಬಾರದು ಎಂದು ಹೇಳಿದರು.

ಸಭೆಯಲ್ಲಿ ಶಾಸಕ ಅಶೋಕ್ ರೈ ,ಮಾಜಿ ಅಧ್ಯಕ್ಷ ನ್ಯಾಯವಾದಿ ಫಝಲ್ ರಹೀಂ,ಅಲ್ಪ‌ಸಂಖ್ಯಾತ ಘಟಕದ ಅಧ್ಯಕ್ಷರಾದ ಶಕೂರ್ ಹಾಜಿ, ಕೆಪಿಸಿಸಿ ಸಂಯೋಜಕ ಚಂದ್ರಹಾಸ ಶೆಟ್ಟಿ,ಎಸ್ ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ್, ಕೆಯ್ಯೂರು ವಲಯ ಅಧ್ಯಕ್ಷ ಎ ಕೆ ಜಯರಾಮ ರೈ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ,ಎಸ್ ಸಿ ಘಟಕದ ಪ್ರಮುಖರಾದ ನಗರಸಭೆಯ ಮಾಜಿ ಸದಸ್ಯ ಮುಕೇಶ್ ಕೆಮ್ಮಿಂಜೆ,ಒಳಮೊಗ್ರು ಮಸ್ಕರೇನಸ್, ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್, ಕೆದಂಬಾಡಿ ವಲಯ ಅಧ್ಯಕ್ಷ ಪುರಂದರ್ ರೈ ಕೋರಿಕ್ಕಾರ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸಿದ್ದಿಕ್ ಸುಲ್ತಾನ್, ಬ್ಲಾಕ್ ಕಾರ್ಯದರ್ಶಿ ಅಮಲ ರಾಮಚಂದ್ರ, ಜಯಲಕ್ಷ್ಮಿ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here