ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ

0

ಪುತ್ತೂರು: ನಗರದ ಹೃದಯ ಭಾಗದಲ್ಲಿರುವ ಪರ್ಲಡ್ಕ ಪಾಂಗಳಾಯಿ ಕಾರಣಿಕ ಕ್ಷೇತ್ರ ಶ್ರೀ ಮುಂಡ್ಯತ್ತಾಯ ದೈವಸ್ಥಾನದಲ್ಲಿ ಗ್ರಾಮದೈವ ಶ್ರೀ ಅರಸು ಮುಂಡ್ಯತ್ತಾಯ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವದ ಅಂಗವಾಗಿ ಜ.6ರಂದು ಮಧ್ಯಾಹ್ನ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಆಶ್ಲೇಷ ಬಲಿ ಪೂಜೆ ಜರುಗಿತು.


ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ.5ರಂದು ನೇಮೋತ್ಸವದ ಅಂಗವಾಗಿ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮತ್ತು ದುರ್ಗಾನಮಸ್ಕಾರ ಪೂಜೆ ನಡೆಯಿತು. ಜ.6ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶಪೂಜೆ, ನಾಗತಂಬಿಲ, ಸಾರ್ವಜನಿಕ ಆಶ್ಲೇಷ ಬಲಿ, ಪಂಚಾಮೃತ ಅಭಿಷೇಕ, ದೈವಗಳ ಸನ್ನಿಧಿಯಲ್ಲಿ ಕಲಶ, ತಂಬಿಲ ಸೇವೆ, ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ವಿವಿಧ ಸಾಮಾಜಿಕ, ಧಾರ್ಮಿಕ, ರಾಜಕೀಯ, ಶೈಕ್ಷಣಿಕ ಸಂಘ -ಸಂಸ್ಥೆಗಳ ಮುಖಂಡರು ಸಹಿತ ಸಾವಿರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ರಾತ್ರಿ ದೈವಗಳ ನೇಮ:
ಸಂಜೆ ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆಯ ಬಳಿಕ ಅರಸು ಮುಂಡ್ಯತ್ತಾಯ, ಪರಿವಾರ ದೈವಗಳಾದ ಗುಳಿಗ, ಪಂಜುರ್ಲಿ, ಕಲ್ಲುರ್ಟಿ ಹಾಗೂ ಪೊಟ್ಟನ್ ದೈವಗಳ ನೇಮೋತ್ಸವ ನಡೆಯಲಿದೆ ಎಂದು ದೈವಸ್ಥಾನದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here