ಮುಕ್ರಂಪಾಡಿ: ಡಿ.31ರಂದು ಅಪಘಾತದಲ್ಲಿ ಗಾಯಗೊಂಡಿದ್ದ ಅಕ್ಟೀವಾ ಸಹ ಸವಾರ ಮೃತ್ಯು

0

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿಯಲ್ಲಿ ಡಿ.31ರಂದು ನಡೆದ ಹೋಂಡಾ ಆಕ್ಟೀವಾ ಹಾಗೂ ಕಾರು ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಕ್ಟೀವಾ ಸಹ ಸವಾರ ಜ.7ರಂದು ಅಪರಾಹ್ನ ಮೃತಪಟ್ಟಿದ್ದಾರೆ.
ಇರ್ದೆ ಗ್ರಾಮದ ಉಪ್ಪಳಿಗೆ ನಾರಾಯಣ ನಾಯ್ಕ ಮತ್ತು ಕಲ್ಯಾಣ ದಂಪತಿ ಪುತ್ರ ಪ್ರವೀಣ(18ವ.) ಮೃತಪಟ್ಟರು.
ಡಿ.31ರಂದು ರಾತ್ರಿ ತನ್ನ ಪರಿಚಿತರೊಂದಿಗೆ ಪುತ್ತೂರಿಗೆ ಬಂದಿದ್ದ ಪ್ರವೀಣ್ ಮನೆಗೆ ಹಿಂತಿರುಗುವ ವೇಳೆ ಮುಕ್ರಂಪಾಡಿ ಸಮೀಪಿಸುತ್ತಿದ್ದಂತೆ ಎದುರುಗಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಘಟನೆಯಿಂದ ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದ ಆಕ್ಟೀವಾ ಸಹ ಸವಾರ ಪ್ರವೀಣ್ ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜ್ಯೋತಿಯಲ್ಲಿರುವ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರವೀಣ್ ಜ.7ರಂದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ನೋವಲ್ಲು ಅಂಗಾಂಗ ದಾನ:
ಪುತ್ರ ಶೋಕದ ನಡುವೆಯು ಮೃತ ಪ್ರವೀಣ ಅಂಗಾಂಗ ದಾನಕ್ಕೆ ಹೆತ್ತವರು ಒಪ್ಪಿಗೆ ನೀಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here