ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

0

ಪುತ್ತೂರು: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಪಿಲಿಕಲ್ ನಿವಾಸಿಯಾಗಿದ್ದು ಪ್ರಸ್ತುತ ಮಂಗಳೂರಿನ ಅಂಬಿಕಾನಗರದಲ್ಲಿ ನೆಲೆಸಿರುವ ಚೈತ್ರೇಶ್ ಇಳಂತಿಲ ಅವರು ಬೆಳ್ತಂಗಡಿ ತಾಲೂಕಿನನಲ್ಲಿ ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರರಾಗಿ ಕಳೆದ ಐದು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಬಿ.ಸಿ.ಚೆನ್ನಪ್ಪ ಮತ್ತು ಪ್ರೇಮಾ ಪಿ. ದಂಪತಿಯ ಪುತ್ರರಾದ ಚೈತ್ರೇಶ್ ಅವರು ಇಳಂತಿಲ ಅಂಡೆತಡ್ಕ ಶಾಲೆಯಲ್ಲಿ ಪ್ರಾಥಮಿಕ, ಕರಾಯ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ಉಪ್ಪಿನಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಪಿಯು ಶಿಕ್ಷಣ ಪಡೆದು ಬಳಿಕ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದಿದ್ದಾರೆ. ನಂತರ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಮೂರನೇ ರ‍್ಯಾಂಕ್‌ನೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದ ಚೈತ್ರೇಶ್ ಅವರು ಸುದ್ದಿ ಬಿಡುಗಡೆ ಪತ್ರಿಕಾ ಬಳಗದಲ್ಲಿ ವೃತ್ತಿ ಜೀವನ ಆರಂಭಿಸಿದ್ದರು.

ಸುದ್ದಿ ಬಿಡುಗಡೆ ಪುತ್ತೂರು ಕಚೇರಿ ವರದಿಗಾರರಾಗಿ, ಮಂಗಳೂರು ಸುದ್ದಿ ಬಿಡುಗಡೆ ಕಚೇರಿಯಲ್ಲಿ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದ ಚೈತ್ರೇಶ್ ಅವರು ಬಳಿಕ ಸಂಯುಕ್ತ ಕರ್ನಾಟಕದಲ್ಲಿ ವರದಿಗಾರ ಹಾಗೂ ಉಪಸಂಪಾದಕನಾಗಿ, ವಿಜಯವಾಣಿ ದಿನ ಪತ್ರಿಕೆಯಲ್ಲಿ ಮಂಗಳೂರು ಬ್ಯೂರೋ ಉಪಸಂಪಾದಕನಾಗಿ, ಬೆಂಗಳೂರು ಬ್ಯೂರೋದಲ್ಲಿ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಎಡಿಷನ್‌ಗಳ ಮುಖ್ಯ ಉಪಸಂಪಾದಕನಾಗಿ ಒಟ್ಟು ನಾಲ್ಕು ವರ್ಷ ಸೇವೆ ಸಲ್ಲಿಸಿದ್ದಾರೆ.

ಕಳೆದ ಐದು ವರ್ಷಗಳಿಂದ ಉದಯವಾಣಿಯಲ್ಲಿ ಬೆಳ್ತಂಗಡಿ ತಾಲೂಕು ಮುಖ್ಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಇವರು ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದು ರಾಜ್ಯ ಪತ್ರಕರ್ತರ ಸಂಘದ ಸದಸ್ಯರಾಗಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಸಲಹಾ ಸಮಿತಿ ಸದಸ್ಯರಾಗಿ, ಉಜಿರೆ ಕಾಲಭೈರವ ಕ್ರಿಡಿಟ್ ಕೋ ಆ-ಪರೇಟಿವ್ ಸೊಸೈಟಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಕೋಶಾಧಿಕಾರಿಯಾಗಿ, ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದ ಚೈತ್ರೇಶ್ ಅವರು ೨೦೨೪ನೇ ಸಾಲಿನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here