ಕಂಬಳಬೆಟ್ಟು ಹಿ.ಪ್ರಾ ಶಾಲೆಯಲ್ಲಿ ಮಕ್ಕಳ‌ ಗ್ರಾಮ ಸಭೆ

0

ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸುವ ಜವಾಬ್ದಾರಿ ಪೋಷಕರದ್ದಾಗಿದೆ: ಪುನೀತ್ ಮಾಡ್ತಾರ್
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವತಿಯಿಂದ ಕಂಬಳಬೆಟ್ಟು ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆಯು ಶಾಲಾ ವಿದ್ಯಾರ್ಥಿನಿ ಆಯಿಶತ್ ಮುಫೀದರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಂಬಳಬೆಟ್ಟು, ನಾಟೆಕಲ್ಲು , ಕುಶಾಲನಗರ ಹಾಗೂ ಜನಪ್ರಿಯ ಶಾಲೆಯ ಮಕ್ಕಳು ಭಾಗವಹಿಸಿ ಕಂಬಳಬೆಟ್ಟು ಪೇಟೆಯಲ್ಲಿ ಮೆರವಣಿಗೆ ಸಾಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ಕೊಟ್ಟರು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡತ್ತಾರ್ ರವರು ಮಾತನಾಡಿ ಗ್ರಾಮದ ಪ್ರತೀ ಮಗುವಿಗೂ ಆರೋಗ್ಯದಾಯಕ ವಾತಾವರಣ ಕಲ್ಪಿಸುವುದು, ಮಕ್ಕಳಿಗೆ ಸುಂದರವಾದ ಬಾಲ್ಯವನ್ನು ಕಲ್ಪಿಸಿಕೊಟ್ಟು ಉತ್ತಮ ಪ್ರಜೆಯನ್ನಾಗಿ ರೂಪಿಸುವ ಕರ್ತವ್ಯ ನಾಗರಿಕ ಸಮಾಜದ್ದಾಗಿದೆ. ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸುವ ಜವಾಬ್ದಾರಿ ಪೋಷಕರದ್ದಾಗಿದೆ ಎಂದರು.
ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಯ ಕುರಿತು ದ.ಕ ಮಕ್ಕಳ ರಕ್ಷಣಾ ಘಟಕದ ವಜೀದ್ ಅಹಮ್ಮದ್ ಅವರು ಮಾಹಿತಿಯನ್ನು ನೀಡಿದರು.

ಪ್ರತಿಭಾ ಕಾರಂಜಿ ಮತ್ತು ಕ್ರೀಡೆಗಳಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ, ರಸಪ್ರಶ್ನೆ ವಿಜೇತರಾದ ಮಕ್ಕಳನ್ನು ಗುರುತಿಸಲಾಯಿತು.
ಮಕ್ಕಳ ಕೆಲವು ಬೇಡಿಕೆಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಸಮಸ್ಯೆ ಬಗೆಹರಿಸುವ ಬಗ್ಗೆ ಹಾಗೂ ನಿಯಮಾನುಸಾರ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಯ.ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು, ವೇದಿಕೆಯಲ್ಲಿ ಪಂಚಾಯತ್ ಸದಸ್ಯರಾದ ಮಹಾಬಲೇಶ್ವರ ಭಟ್, ಪ್ರೇಮಲತಾ ಪಟ್ಲ, ಸಾಬಿರ, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಅಬ್ದುಲ್ ರಹಿಮಾನ್(ಅದ್ರು), ಸಿಆರ್ ಪಿ ಜ್ಯೋತಿ, ಕಂಬಳಬೆಟ್ಟು ಶಾಲಾ ಮುಖ್ಯೋಪಾಧ್ಯಾಯಿನಿ ವಾರಿಜ, ವಿಟ್ಲ ಸಮುದಾಯ ಆಸ್ಪತ್ರೆಯ ಸಿಬ್ಬಂದಿ ಕೀರ್ತಿ, ಸಿಹೆಚ್ ಒ. ಸಂಜಯ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here