ಜ.12: ವಿವೇಕಾನಂದ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ-ಜ.13 ರಿಂದ 22 : ಶ್ರೀರಾಮ ಪ್ರಾಣ ಪ್ರತಿಷ್ಠಾ ಸಪ್ತಾಹ ಸರಣೆ ವಿಚಾರ ಸಂಕಿರಣ

0

ಪುತ್ತೂರು: ಪ್ರತೀ ವರ್ಷದಂತೆ ಈ ವರ್ಷವೂ ಜ. 12 ರಂದು ನೆಹರುನಗರ ವಿವೇಕಾನಂದ ಕಾಲೇಜಿನ ಆವರಣದ ವಿವೇಕಾನಂದ ಬಯಲು ಮಂದಿರದಲ್ಲಿ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದ್ದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ “ಜನನಿ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ” ಎಂಬ ಪರಿಕಲ್ಪನೆಯೊಂದಿಗೆ ఈ ಬಾರಿಯ ವಿವೇಕಾನಂದ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ ಯಂ ಕೃಷ್ಣ ಭಟ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ್. ಭಟ್ ಕಲ್ಲಡ್ಕ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಅಂಕಣಗಾರ ಪ್ರಕಾಶ್ ಮಲ್ಪೆ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಏಳು ಸಾವಿರ ಮಂದಿಯ ನಿರೀಕ್ಷೆ:
ವಿವೇಕಾನಂದ ಅವರಣದಲ್ಲಿ ನಡೆಯಲಿರುವ ಈ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಕಾಲೇಜು, ವಿವೇಕಾನಂದ ಪದವಿ ಪೂರ್ವ ಕಾಲೇಜು, ವಿವೇಕಾನಂದ ಸ್ನಾತಕೋತ್ತರ ಕಾಲೇಜು, ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ವಿವೇಕಾನಂದ ಪಾಲಿಟೆಕ್ನಿಕ್, ವಿವೇಕಾನಂದ ಸೆಂಟ್ರಲ್ ಸ್ಕೂಲ್ (ಸಿಬಿಎಸ್ಸಿ), ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್.), ವಿವೇಕಾನಂದ ಕಾನೂನು ಕಾಲೇಜು, ವಿವೇಕಾನಂದ ಇನ್ ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯೂಟಿಕಲ್ ಸಯನ್ಸ್ ಹಾಗು ವಿವೇಕಾನಂದ ವಿದ್ಯಾವರ್ಧಕ ಸಂಘ ಮತ್ತೂರು (ರಿ) ಇದರ ವತಿಯಿಂದ ನಡೆಸುತ್ತಿರುವ ಪ್ರೌಢ ಶಾಲೆಗಳ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಹೆತ್ತವರು. ಆಡಳಿತ ಮಂಡಳಿಯ ಸದಸ್ಯರು. ಉಪನ್ಯಾಸಕ ಹಾಗೂ ಉಪನ್ಯಾಸಕೇತರ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು ರಂಗ ಪುತ್ಥಳಿ ಕಲಾವಿದರಿಂದ ಬೊಂಬೆಯಾಟ:
ಸಭಾ ಕಾರ್ಯಕ್ರಮದ ನಂತರ ಸ್ವಾಮೀ ವಿವೇಕಾನಂದರ ಜೀವನ ಚರಿತ್ರೆ ಆಧಾರಿತ ಪ್ರಸಂಗವನ್ನು ಸೂತ್ರ ಮತ್ತು ಸಲಾಕೆ ಬೊಂಬೆಯಾಟದ ಮೂಲಕ ರಂಗ ಪುತ್ಥಳಿ ಬೊಂಬೆಯಾಟದ ಕಲಾವಿದರು, ಬೆಂಗಳೂರು ಪ್ರಸ್ತುತ ಪಡಿಸಲಿದ್ದಾರೆ.

ವಾಲ್ಮೀಕಿ ರಾಮಾಯಣ ಕುರಿತ ಚಿತ್ರ ಪ್ರದರ್ಶನ:
ಹಿಂದೂ ಧರ್ಮದ ಪ್ರಮುಖ ಎರಡು ಮಹಾಕಾವ್ಯಗಳಲ್ಲಿ ರಾಮಾಯಣವೂ ಒಂದು. ಕೃತಿಗಳಲ್ಲಿ ಆಚ್ಚಾಗಿರುವ ರಾಮಾಯಣದ ಸಾಮಾಜಿಕ ಮೌಲ್ಯಗಳು, ಪರಂಪರೆ, ಸಂಪ್ರಾದಾಯ, ವಿಚಾರಧಾರೆಗಳನ್ನು ಪಸರಿಸುವ ನಿಟ್ಟಿನಲ್ಲಿ 2024ರ ವಿವೇಕ ಜಯಂತಿಯ ವಿಶೇಷ ಆಕರ್ಷಣೆಯಾಗಿ ಭರತಕಂಡದಲ್ಲಿ ಇತಿಹಾಸವನ್ನೇ ಸೃಷ್ಟಿಸಿದ ರಾಮಾಯಣದ ನೈಜ ಘಟನಾಧಾರಿತ ಚಿತ್ರ ಪ್ರದರ್ಶನವಿರಲಿದೆ.

ಶ್ರೀರಾಮ ಕಥಾ ವೈಭವ:
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ವತಿಯಿಂದ ಶ್ರೀರಾಮ ಕಥಾ ವೈಭವವು ಜ. 14ರಂದು ಸಂಜೆ ವಿವೇಕ ನಗರದಲ್ಲಿ ಜರುಗಲಿದೆ.

ಶ್ರೀರಾಮ ಪ್ರಾಣ ಪ್ರತಿಷ್ಠಾ ಸಪ್ತಾಹ ಸರಣೆ ವಿಚಾರ ಸಂಕಿರಣ:
ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾ ಸಮಾರಂಭದ ವಿವೇಕಾನಂದ ವಿದ್ಯಾವರ್ಧಕ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಜ.13 ರಿಂದ 22 ರ ತನಕ ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಉದ್ಘಾಟನಾ ಕಾರ್ಯಕ್ರಮವನ್ನು ಜ.13ರಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ ಯಂ ಕೃಷ್ಣ ಭಟ್ ಮಾಡಲಿದ್ದಾರೆ.

ರಾಮಾಯಣಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳನ್ನು ಯುವಪೀಳಿಗೆಗೆ ತಿಳಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘ ಮಾಡುತ್ತಿದೆ. ಈ ಸರಣಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜ. 22ರಂದು ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ ಪ್ರಭಾಕರ್ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಹ ಕಾರ್ಯದರ್ಶಿ ರೂಪಲೇಖ, ಕೋಶಾಧಿಕಾರಿ ಅಚ್ಚುತ ನಾಯಕ್ , ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಅಕ್ಷಯ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here