ನೆಲ್ಯಾಡಿ ಗ್ರಾ.ಪಂ: ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

0

ನೆಲ್ಯಾಡಿ : ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 2023-24ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ ಜ.10ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ರೇಷ್ಮಾ ಶಶಿ ಅವರು ಮಾತನಾಡಿ, ವಿಕಲಚೇತನರಿಗೆ ಇರುವ ಸವಲತ್ತುಗಳನ್ನು ಪಡೆದುಕೊಳ್ಳುವಂತೆ ಹೇಳಿದರು.

ತಾಲೂಕು ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತೆಯಾದ ಅಕ್ಷತಾ ಅವರು ವಿಕಲಚೇತನರಿಗೆ ಸರಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ತಿಳಿಸಿದರು. ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಕೆ.ಸಿ.ಅನ್ನಮ್ಮ ಅವರು ಕ್ಷಯಾ ರೋಗ ಹಾಗೂ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ಮಹಮ್ಮದ್ ಇಕ್ಬಾಲ್, ಉಷಾ ಜೋಯಿ, ಪುಷ್ಪಾ ಪಡುಬೆಟ್ಟು, ನೆಲ್ಯಾಡಿ ಗ್ರಾಮ ಪಂಚಾಯತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯಾದ ಸಹನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆರೋಗ್ಯ ಸಹಾಯಕಿ ಲೀಲಾ , ಆಶಾ ಕಾರ್ಯಕರ್ತೆಯರು, ವಿಕಲ ಚೇತನರ ಪೋಷಕರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಸಿಬ್ಬಂದಿ ಶಿವಪ್ರಸಾದ್ ಸ್ವಾಗತಿಸಿದರು. ಲೆಕ್ಕ ಸಹಾಯಕ ಅಂಗು ನಿರೂಪಿಸಿ, ಕೊನೆಯಲ್ಲಿ ವಂದಿಸಿದರು. ಸಿಬ್ಬಂದಿಗಳಾದ ಸೋಮಶೇಖರ, ಗಿರೀಶ್, ಲಲಿತ, ಭವ್ಯ, ಲೀಲಾವತಿ ಅವರು ಸಹಕರಿಸಿದರು.

LEAVE A REPLY

Please enter your comment!
Please enter your name here