ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರದ ಹೆಸರು ಇನ್ನು `ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.)’

0

ಪುತ್ತೂರು: ಕಳೆದ 19 ವರ್ಷಗಳಿಂದ ಕಲೆ ಹಾಗೂ ಸಾಂಸ್ಕೃತಿಕ ಸಂಘಟನೆಯಾಗಿ ಕಾರ್ಯ ನಿರ್ವಹಿಸುತ್ತಿರುವ ದ.ಕ.ಜಿಲ್ಲೆಯ ಪುತ್ತೂರಿನ ನೃತ್ಯೋಪಾಸನಾ ಕಲಾ ಕೇಂದ್ರ(ರಿ.)
ತನ್ನ 20ನೇ ವರ್ಷ ಪಾದಾರ್ಪಣೆಯ ಸಂಭ್ರಮ ಆಚರಣೆ ವೇಳೆ `ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ)’ಪುತ್ತೂರು, ದ.ಕ.ಎಂದು ಪುನರ್ ನಾಮಕರಣಗೊಂಡಿದೆ.

ನೃತ್ಯೋಪಾಸನಾ ಕಲಾ ಅಕಾಡೆಮಿ ಹೆಸರಿನಲ್ಲಿ ಮುಂದಿನ ದಿನಗಳಲ್ಲಿ ಕಲೆ, ಸಂಸ್ಕೃತಿಯ ರಕ್ಷಣೆ ಹಾಗೂ ಬೆಳವಣಿಗೆಗೆ ಇನ್ನಷ್ಟು ಹೊಸ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದೆ.ಈ ಹಿನ್ನೆಲೆಯಲ್ಲಿ ನೃತ್ಯೋಪಾಸನಾ ಕಲಾ ಅಕಾಡೆಮಿ(ರಿ.)ಇದರ ಲೋಗೋವನ್ನು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಬುಧವಾರ ಶ್ರೀ ಎಡನೀರು ಮಠದಲ್ಲಿ ಅನಾವರಣಗೊಳಿಸಿ ಅನುಗ್ರಹಿಸಿದರು.

ನೃತ್ಯೋಪಾಸನಾ ಕಲಾ ಅಕಾಡೆಮಿಯಿಂದ ಮತ್ತಷ್ಟು ವೈವಿಧ್ಯಯಮ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿಬರಲಿ,ಈ ಅಕಾಡೆಮಿಯ ಶ್ರೇಯಸ್ಸು ಇನ್ನಷ್ಟು ವಿಸ್ತಾರಗೊಳ್ಳಲಿ ಎಂದು ಆಶೀರ್ವದಿಸಿದರು.ಈ ಸಂದರ್ಭ ಕಲಾ ಕೇಂದ್ರದ ಸಂಸ್ಥಾಪಕ, ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಮತ್ತು ಪ್ರಧಾನ ಕಾರ್ಯದರ್ಶಿ ಆತ್ಮಭೂಷಣ್ ಇದ್ದರು.

LEAVE A REPLY

Please enter your comment!
Please enter your name here