ಕಾಣಿಯೂರು: ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ರಾಸಾಯನಿಕಗಳು ಮತ್ತು ರಸಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವ ಭಗವತ್ ಖೂಬ ಅವರು ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಗುಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಡಾ. ನಿಂಗಯ್ಯ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ವಿ. ಭಟ್, ಶೋಭಾ ಗಿರಿಧರ್, ಕಡಬ ತಹಶೀಲ್ದಾರ್ ಪ್ರಭಾಕರ್ ಖಜೂರೆ, ಪ್ರಮುಖರಾದ ಎಸ್. ಎನ್. ಮನ್ಮಥ, ಶ್ರೀನಾಥ್ ಬಾಳಿಲ, ಸಂತೋಷ್ ಜಾಕೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.