ನಿಡ್ಪಳ್ಳಿ: ಚೂರಿಪದವು ಶಾಲಾ ನೂತನ ಕೊಠಡಿ ಉದ್ಘಾಟನೆ

0

ನಿಡ್ಪಳ್ಳಿ: ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಚೂರಿಪದವು  ಇದರ ನೂತನ ತರಗತಿ ಕೊಠಡಿಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ  ವೆಂಕಟ್ರಮಣ ಬೋರ್ಕರ್ ಕಾರ್ಯಕ್ರಮ ಉದ್ಘಾಟಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶಾಸಕ  ಆಶೋಕ್ ಕುಮಾರ್ ರೈ ನೂತನ ತರಗತಿ ಕೊಠಡಿಯನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ  ಸಂಜೀವ ಮಠಂದೂರು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ನಿಡ್ಷಳ್ಳಿ ಗ್ರಾಮ ಪಂಚಾಯತ್ ಸದಸ್ಯ ಅವಿನಾಶ್ ರೈ, ಬಾಲಚಂದ್ರ.ಕೆ, ಗ್ರೆಟ್ಟಾ ಜೆನೆಟಾ ಡಿ.ಸೋಜಾ  ಹಾಗೂ ಶಾಲಾ ಸ್ಥಾಪಕ ಅಧ್ಯಕ್ಷ ತಿಮ್ಮಣ್ಣ ರೈ ಆನಾಜೆ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಬಾಲಚಂದ್ರ ರೈ ಆನಾಜೆ, ಕಮಲಾಕ್ಷ ಕುಲಾಲ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ರೈ, ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುಮ ಶಶಿಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಹಾಗೂ  ಮಹಮ್ಮದ್ ಶರೀಪ್ ರೋಯಲ್ ರೆಂಜ ಇವರು ಕಾರ್ಯಕ್ರಮಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಸುಮ ಶಶಿಪೂಜಾರಿ ಸ್ವಾಗತಿಸಿದರು. ಶಾಲಾ ಮುಖ್ಯ ಗುರು ಲಕ್ಷ್ಮಿ ಕೆ ವರದಿ ವಾಚಿಸಿದರು. ಸಹ ಶಿಕ್ಷಕರಾದ ಐರಿನಾ ಕ್ರಾಸ್ತಾ ಹಾಗೂ ಅತಿಥಿ ಶಿಕ್ಷಕಿ ಸುಜಾತ.ಕೆ  ಬಹುಮಾನದ ಪಟ್ಟಿ ವಾಚಿಸಿದರು. ಸಹ ಶಿಕ್ಷಕಿ ಕುಮುದ.ಎ ವಂದಿಸಿದರು. ಬಾಲಕೃಷ್ಣ ರೈ ಪೊರ್ದಾಲ್ ಹಾಗೂ ಭವ್ಯ ಪಡುಮಲೆ ಕಾರ್ಯಕ್ರಮ ನಿರೂಪಿಸಿದರು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಹಾಗೂ ಸರ್ವಸದಸ್ಯರು, ಹಿರಿಯ ವಿಧ್ಯಾರ್ಥಿ ಸಂಘ, ಶಾಂತದುರ್ಗಾ ಯುವಕ ಮಂಡಲ, ಪೋಷಕರು, ಅಂಗನವಾಡಿ ಸಿಬ್ಬಂದಿಗಳು, ಅಡುಗೆ ಸಿಬ್ಬಂದಿಗಳು, ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಗಳ ಸದಸ್ಯರು, ಊರ ವಿಧ್ಯಾಭಿಮಾನಿಗಳು ಪಾಲ್ಗೊಂಡರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು,ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್,ಗುತ್ತಿಗೆದಾರ ಅಪ್ಪಣ್ಣ ನಾಯ್ಕ ಇವರನ್ನು ಸನ್ಮಾನಿಸಲಾಯಿತು. 

LEAVE A REPLY

Please enter your comment!
Please enter your name here