ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಸಂಚಾಲಕರಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ರವರಿಗೆ ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆ ನೀಡಲಾಯಿತು. ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿಗಳಾದ ಶರಣ್ ಪಂಪುವೆಲ್, ಜಿಲ್ಲಾಧ್ಯಕ್ಷ ಎಚ್ ಕೆ ಪುರುಷೋತ್ತಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಜಿಲ್ಲಾ ಉಪಾಧ್ಯಕ್ಷರು ಮನೋಹರ್ ಸುವರ್ಣ,ವಿಭಾಗ ಬಜರಂಗದಳ ಸಂಯೋಜಕರಾದ ಭುಜಂಗ ಕುಲಾಲ್, ಸಹಸಂಯೋಜಕ ಪುನೀತ್ ಅತ್ತಾವರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.