ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಸೌದಿ ರಾಷ್ಟ್ರೀಯ ಸಮಿತಿಯ ನಾಯಕರ ಭೇಟಿ

0

ಪುತ್ತೂರು: ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿಗೆ ಮರ್ಕಝುಲ್ ಹುದಾ ಸೌದಿ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಫಾರೂಕ್ ಹಾಜಿ ಕನ್ಯಾನ, ಕಾರ್ಯದರ್ಶಿ ಅಲೀ ಕನ್ಯಾನ ಭೇಟಿ ನೀಡಿದರು.


ಮರ್ಕಝುಲ್ ಹುದಾ ಸೌದಿ ರಾಷ್ಟ್ರೀಯ ಸಮಿತಿ ವತಿಯಿಂದ ನಿರ್ಮಿಸಲ್ಪಡಲಿರುವ ನೂತನ ಹಾಸ್ಟೆಲ್ ಕಟ್ಟಡದ ಸ್ಥಳ ಪರಿಶೀಲನೆ ಸಂಬಂಧಿತವಾಗಿ ಆಗಮಿಸಿದ ಅವರು ಸಂಸ್ಥೆಯ ಅಭಿವೃದ್ಧಿ ಕಾರ್ಯಚಟುವಟಿಕೆಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಈ ವೇಳೆ ಸಂಸ್ಥೆಯ ಅಧ್ಯಕ್ಷ ಅಬ್ದುರ್ರಹ್ಮಾನ್ ಹಾಜಿ ಅರಿಯಡ್ಕ , ಅಡಿಟರ್ ಅನ್ವರ್ ಹುಸೇನ್ ಗೂಡಿನಬಳಿ, ಸದಸ್ಯ ಶಂಸುದ್ದೀನ್ ಬೈರಿಕಟ್ಟೆ, ಪದವಿ ವಿಭಾಗದ ಪ್ರಾಂಶುಪಾಲ ಮುಹಮ್ಮದ್ ಮನ್ಸೂರ್, ಮೆನೇಜರ್ ಉಮರ್ ಅಮ್ಜದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here