ಪುತ್ತೂರು: ಸ್ನೇಹಸಂಗಮ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದ 26ನೇ ವರ್ಷದ ವಾರ್ಷಿಕ ಮಹಾಸಭೆ ಜ.13ರಂದು ಅಪರಾಹ್ನ 2.30ರಿಂದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ನಿಗಮದ ಮಾಜಿ ಅಧ್ಯಕ್ಷೆ ದಿವ್ಯಪ್ರಭಾ ಗೌಡ ಚಿಲ್ತಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಯಿದೆ ದೇವುಸ್ ಚರ್ಚ್ನ ಧರ್ಮಗುರು ಲಾರೆನ್ಸ್ ಮಸ್ಕರೇನಸ್, ಸ್ನೇಹಸಂಗಮ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.