ಸುಬ್ರಹ್ಮಣ್ಯ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತ್ಯು

0

ಕಡಬ : ಸುಬ್ರಹ್ಮಣ್ಯ ಪದವಿ ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿನಿ ತೃಪ್ತಿ ತೀವ್ರ ಅನಾರೋಗ್ಯದಿಂದ ಜ 11ರಂದು ರಾತ್ರಿ ನಿಧನರಾಗಿದ್ದಾರೆ.
ಎರಡು ದಿನಗಳಿಂದ ಅನಾರೋಗ್ಯದಿಂದಿದ್ದ ಬಳಲುತ್ತಿದ್ದ ಈಕೆಯನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃಪಟ್ಟಿರುವುದಾಗಿ ತಿಳಿದು ಬಂದಿದೆ.


ಪಾರ್ಥಿವ ಶರೀರವನ್ನು ಎಡಮಂಗಲದ ಮನೆಗೆ ತಂದು ಇಂದು ಜ.12 ರಂದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ತಿಳಿದು ಬಂದಿದೆ . ಮೃತರು ತಂದೆ ರಾಮಚಂದ್ರ, ತಾಯಿ ಆಶಾ ಮತ್ತು ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here