ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತು ಪುತ್ತೂರಿನ ಮೆಡಿಕಲ್ ಕಾಲೇಜು ವಿಚಾರದಲ್ಲಿ ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಹಾಗೂ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಪ್ರಮುಖರು ಉಸ್ತುವಾರಿಗಳು ಸಚಿವ ದಿನೇಶ್ ಗುಂಡೂರಾವ್ ಜೊತೆ ಮಾತುಕತೆ ನಡೆಸಿದರು.
ಈ ವೇಳೆ ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ, ಡಾ.ರಾಜಾರಾಂ ಕೆ ಬಿ, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ,ಬ್ಲಾಕ್ ಮಾಜಿ ಅಧ್ಯಕ್ಷ ಮುರಳೀದರ್ ರೈ ಮಟಂತಬೆಟ್ಟು, ಅನ್ವರ್ ಖಾಸಿಂ, ಫಾರೂಕ್ ಬಾಯಬ್ಬೆ, ಇಸಾಕ್ ಸಾಲ್ಮರ, ರಾಕೇಶ್ ರೈ ಕುದ್ಕಾಡಿ ಮೊದಲಾದವರು ಉಪಸ್ಥಿತರಿದ್ದರು.