ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಮಾಜಿಕ ಜಾಗೃತಿ ಕಾರ್ಯಕ್ರಮ

0

ಡ್ರಗ್ಸ್ ಬಗೆಗೆ ಜನಜಾಗೃತಿ ಮೂಡಿಸುವುದು ಅಗತ್ಯ : ಸ್ವಾತಿ ರೈ


ಪುತ್ತೂರು : ಇಂದು ಡ್ರಗ್ಸ್ ಪಿಡುಗು ಎಲ್ಲಾ ಕಡೆಯಲ್ಲಿ ವಿಪರೀತವಾಗಿ ವ್ಯಾಪಿಸಿದ್ದು, ಅದರ ಕುರಿತಾಗಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ. ಬೀದಿ ನಾಟಕದ ಮೂಲಕ ಮೂಡಿಸುವ ಜಾಗೃತಿ ಅತ್ಯಂತ ಹೆಚ್ಚು ಪರಿಣಾಮಕಾರಿ ಎಂದು ನ್ಯಾಯವಾದಿ ಸ್ವಾತಿ ರೈ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂರ್ಸತೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವ ಪ್ರಯುಕ್ತ ಆಯೋಜಿಸಲಾದ ಬೀದಿ ನಾಟಕ ಜಾಗೃತಿ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಉದ್ಘಾಟಿಸಿ ಸೋಮವಾರ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಡ್ರಗ್ಸ್ ಮಾಫಿಯಾ ಎಲ್ಲೆಡೆ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸುತ್ತಿದೆ, ಇದರ ಮೂಲಕ ನಮ್ಮ ದೇಶದ ಮತ್ತು ಯುವಜನರ ಸರ್ವನಾಶದ ಹುನ್ನಾರ ನಿರಂತರವಾಗಿ ನಡೆಯುತ್ತಿದೆ. ಹಾಗಾಗಿ ಅದರ ವಿರುದ್ಧ ಹೋರಾಟದ ಕೆಲಸಗಳಾಗಬೇಕಿದೆ. ಬೀದಿನಾಟಕದಂತಹ ಸಾಮಾಜಿಕ ಜಾಗೃತಿ ಕಾರ್ಯಕ್ರಮದ ಮೂಲಕ ಸಮಾಜದೆಲ್ಲೆಡೆ ಅರಿವು ಮೂಡಿಸಬೇಕಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅನಘ ಸ್ವಾಗತಿಸಿ ನಿರೂಪಿಸಿದರು. ವಿದ್ಯಾರ್ಥಿನಿ ನಿಯತಿ ಭಟ್ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಮಾಜಿಕ ಜಾಗೃತಿ ಮೂಡಿಸುವ ಬೀದಿ ನಾಟಕವು ಶಾಲಾ ಆವರಣದಲ್ಲಿ, ಪುತ್ತೂರಿನ ದರ್ಬೆ ವೃತ್ತದ ಬಳಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಮತ್ತು ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ವಿದ್ಯಾರ್ಥಿಗಳಿಂದ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here