ಪುತ್ತೂರು: ಪ್ರತಿಷ್ಠಿತ ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಆಯ್ಕೆಗೆ ಜ. 13ರಂದು ಬೆಳಿಗ್ಗೆ 9ರಿಂದ ಮತದಾನ ಆರಂಭಗೊಂಡಿದ್ದು, ಮಧ್ಯಾಹ್ನದ ತನಕ ಶೇ.70 ಮತದಾನ ನಡೆದಿದೆ.
![](https://puttur.suddinews.com/wp-content/uploads/2024/01/8f6dd790-5468-4dc0-9150-2b0f877bac35.jpg)
ಒಟ್ಟು 12 ಸ್ಥಾನಗಳ ಪೈಕಿ 1 ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದ್ದು, ಉಳಿದಿರುವ 11 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಒಟ್ಟು 23 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಇದ್ದಾರೆ. ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಮತ್ತು ಕಾಂಗ್ರೇಸ್ ಎಲ್ಲಾ 11 ಸ್ಥಾನಗಳಿಗೆ ಸ್ಪರ್ಧೆ ಮಾಡುತ್ತಿದ್ದು, ಪಕ್ಷೇತರ ಅಭ್ಯರ್ಥಿ ಒಂದು ಸ್ಥಾನದಲ್ಲಿ ಸ್ಪರ್ಧೆಯನ್ನು ಮಾಡುತ್ತಿದ್ದಾರೆ.
ಸಂಜೆ ಫಲಿತಾಂಶ ಜ.13ರಂದು ಸಂಜೆ 6 ಗಂಟೆಯೊಳಗೆ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿ ಶೋಭಾ ಎನ್ .ಎಸ್ ರವರು ತಿಳಿಸಿದ್ದಾರೆ.