ನೆಲ್ಯಾಡಿ ಸಂತ ಜಾರ್ಜ್ ಪ.ಪೂರ್ವ ಕಾಲೇಜಿನಲ್ಲಿ ವಿವೇಕ ಜಯಂತಿ,ಯುವ ಸಪ್ತಾಹ

0

ನೆಲ್ಯಾಡಿ: ನೆಲ್ಯಾಡಿ ಸಂತ ಜಾರ್ಜ್ ಪದಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ವಿವೇಕ ಜಯಂತಿ ಪ್ರಯುಕ್ತ ರಾಷ್ಟ್ರೀಯ ಯುವ ದಿನದ ಅಂಗವಾಗಿ ಯುವ ಸಪ್ತಾಹ ಕಾರ್ಯಕ್ರಮ ಸಂಸ್ಥೆಯ ಸಂಚಾಲಕ ರೆ.ಫಾ.ನೋ ಮಿಸ್ ಕೊರಿಯಾಕೋಸ್ ಮಾರ್ಗದರ್ಶನದಲ್ಲಿ ನಡೆಯಿತು.


ಬೆಥನಿ ಕೈಗಾರಿಕಾ ತರಬೇತಿ ವಿದ್ಯಾ ಸಂಸ್ಥೆಯ ಉಪನ್ಯಾಸಕ ಜೋನ್ ಪಿ.ಎಸ್. ರವರು ದೀಪ ಬೆಳಗಿಸಿ ಯುವ ಸಪ್ತಾಹವನ್ನು ಉದ್ಘಾಟನೆಗೊಳಿಸಿ ಮಾತನಾಡಿ ಯುವ ಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ವಿದ್ಯಾಭ್ಯಾಸದ ಜೊತೆಗೆ ಸಮಾಜಮುಖಿ ಸೇವಾ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ದೇಶದ ಭವಿಷ್ಯದ ಭದ್ರತೆ ಯನ್ನು ಬಲಪಡಿಸಬೇಕಾಗಿ ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಏಲಿಯಾಸ್.ಎಂ.ಕೆ. ವಿದ್ಯಾರ್ಥಿಗಳು ಮಾದಕ ದ್ರವ್ಯ ವ್ಯಸನಗಳಿಗೆ ಬಲಿಯಾಗದಂತೆ ಎಚ್ಚರವಹಿಸಿ ಎನ್ಎಸ್ಎಸ್ ವಿದ್ಯಾರ್ಥಿಗಳು ಇತರರಿಗೆ ಮಾದರಿಯಾಗಿ ಇರಬೇಕೆಂದು ನುಡಿದರು. ವೇದಿಕೆಯಲ್ಲಿ ಸಂತ ಜಾರ್ಜ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಗುರು ಹರಿಪ್ರಸಾದ್. ಕೆ.,
ಕಾರ್ಯಕ್ರಮ ಸಂಯೋಜಕ ಮಧು ಎ. ಜೆ. ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಚೇತನ್ ಕುಮಾರ್. ಟಿ, ಕಿರಣ್ ರೈ ,ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ವಿಶ್ವನಾಥ ಶೆಟ್ಟಿ ಕೆ ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಕಾಲೇಜು ಸಂಸತ್ತಿನ ನಾಯಕಿ ಲಿಖಿತ ವಂದಿಸಿ ಎನ್ಎಸ್ಎಸ್ ನಾಯಕ ಮೋಹನ ಕುಮಾರ್, ಕಾವ್ಯ ಉಪಸ್ಥಿತರಿದ್ದರು.


ಉಪನ್ಯಾಸಕ ಪ್ರಜ್ವಲ್ ಕೆ ಪಿ ರವರ ನೇತೃತ್ವದಲ್ಲಿ ಮಾದಕ ಮುಕ್ತ ಜೀವನ ವಿಷಯದ ಬಗ್ಗೆ ವಿಡಿಯೋ ಪ್ರದರ್ಶನ ಮಾಡಲಾಯಿತು.ಎನ್ ಎಸ್ ಎಸ್ ಸ್ವಯಂಸೇವಕಿ ತೃಪ್ತಿ ಮತ್ತು ತಂಡದವರು ಎನ್ ಎಸ್ ಎಸ್ ಧ್ಯೇಯಗೀತೆಯನ್ನು ಹಾಡಿದರು.

LEAVE A REPLY

Please enter your comment!
Please enter your name here