ಮೊರಾರ್ಜಿ ದೇಸಾಯಿ ವಸತಿ ಶಾಲಾ ವಾರ್ಷಿಕೋತ್ಸವ

0

ಸರಕಾರಿ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ; ಶಾಸಕ ಅಶೋಕ್ ರೈ


ಪುತ್ತೂರು; ಪುತ್ತೂರು ಸೇರಿದಂತೆ ಜಿಲ್ಲೆಗಳಲ್ಲಿರುವ ಎಲ್ಲಾ ಸರಕಾರಿ ವಸತಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ ಎಂಬುದಕ್ಕೆ ವಸತಿ ಶಾಲೆಗಳಲ್ಲಿನ ಫಲಿತಾಂಶವೇ ಸಾಕ್ಷಿಯಾಗಿದೆ, ಬಲ್ನಾಡಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತೀ ಬಾರಿಯೂ ಉತ್ತಮ ಪಲಿತಾಂಶ ಬರುತ್ತಿದ್ದು ಇದು ಅಭಿನಂದನಾರ್ಹ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಬಲ್ನಾಡು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.
ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ಸರಕಾರದ ಉದ್ದೇಶವಾಗಿದೆ, ಈ ಕಾರಣಕ್ಕಾಗಿ ಸರಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆಯನ್ನು ನೀಗಿಸಲಾಗಿದೆ.ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪೌಷ್ಠಿಕ ಆಹಾರವನ್ನು ನೀಡಲಾಗುತ್ತಿದೆ. ಶಾಲೆಗಳಲ್ಲಿ ಕೊಠಡಿಗಳ ಸಮಸ್ಯೆಯನ್ನು ಪರಿಹರಿಸಲಾಗಿದೆ, ಮುಂದೆ ಪ್ರತೀ ಎರಡು ಗ್ರಾಮಕ್ಕೊಂದು ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದು ಇದಕ್ಕಾಗಿ 2500 ಕೋಟಿ ರೂ ಅನುದಾನವನ್ನು ಕಾಯ್ದಿರಿಸಲಾಗಿದೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ಕಲಿಯುವ ಆಸಕ್ತಿ ಇದ್ದಲ್ಲಿ ಅವಕಾಶಗಳು ಸಾಕಷ್ಟು ಇದೆ ಅದನ್ನು ಬಳಸಿಕೊಳ್ಳುವ ಕೆಲಸ ಮಕ್ಕಳಿಂದ ಆಗಬೇಕು ಪೋಷಕರು ಇದಕ್ಕೆ ಸಹಕಾರವನ್ನು ನೀಡಬೇಕು ಎಂದು ಶಾಸಕರು ಹೇಳಿದರು.


ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ಅರುಣ್ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವೇದಿಕೆಯಲ್ಲಿ ನಗರಸಭಾ ಸದಸ್ಯೆ ಪೂರ್ಣಿಮಾ, ಬಲ್ನಾಡಿ ಸಿ ಎ ಬ್ಯಾಂಕ್ ಅಧ್ಯಕ್ಷ ಸಗತೀಶ್, ಪುತ್ತೂರು ರೋಟರೀ ಕ್ಲಬ್ ಅದ್ಯಕ್ಷ ಜಯರಾಜ್ ಭಂಡಾರಿ, ನಿವೃತ್ತ ಮುಖ್ಯ ಶಿಕ್ಷಕ ಶ್ರಿನಿವಾಸ್, ಪೋಷಕ ಸಮಿತಿ ಅಧ್ಯಕ್ಷ ಗುರುಶಂಕರ್, ಉಪಾಧ್ಯಕ್ಷೆ ಯಶೋಧಾ, ಶಿಕ್ಷಕರಾದ ತೇಜಸ್, ಸತೀಶ್, ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ರೂಪಲತಾ, ಪುಂಜಾಲಕಟ್ಟೆ ನಾರಾಯಣಗುರು ವಸತಿ ಶಾಲೆಯ ಪ್ರಾಂಶುಪಾಲ ಸಂತೋಷ್, ಪುತ್ತೂರು ಡ್ಯಾಶ್ ಮಾರ್ಕೆಂಟಿಗ್ ವ್ಯವಸ್ಥಾಪಕ ನಿಹಾಲ್ ಶೆಟ್ಟಿ ಕಲ್ಲಾರೆ ಮೊದಲಾದವರು ಉಪಸ್ಥಿತರಿದ್ದರು.


ಶಿಕ್ಷಕ ಸುಬ್ರಹ್ಮಣ್ಯ ಸ್ವಾಗತಿಸಿ, ಶಿಕ್ಷಕಿಯರಾದ ಆಶಾ, ಪ್ರತಿಮಾ ಶಂಕರ್ ವಿವಿಧ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here