ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ – ಇಂದಿನಿಂದ ಜಾತ್ರೋತ್ಸವ ಆರಂಭ

0

*ಜ.14: ಚೌತಿ ಉತ್ಸವ
*ಜ.15: ಪಂಚಮಿ ಉತ್ಸವ
*ಜ.16: ಷಷ್ಠಿ ಉತ್ಸವ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜ.14ರಿಂದ ಜ. 16ರವರೆಗೆ ನಡೆಯಲಿರುವ ವರ್ಷವಧಿ ಜಾತ್ರೋತ್ಸವ ಅಂಗವಾಗಿ ಜ. 13ರಂದು ಬೆಳಗ್ಗೆ ಉಗ್ರಾಣ ಮುಹೂರ್ತ ನಡೆಯಿತು.


ಕ್ಷೇತ್ರದ ಪ್ರಧಾನ ಅರ್ಚಕರಾದ ಗೋವಿಂದ ಜೋಯಿಸರವರು ವಿಧಿ ವಿಧಾನ ನೆರವೇರಿಸಿದರು. ಅರ್ಚಕರಾದ ಗೋಪಾಲಕೃಷ್ಣ ಭಟ್ ರವರು ಸಹಕರಿಸಿದರು. ಕ್ಷೇತ್ರದ ಪದ ನಿಮಿತ್ತ ಆಡಳಿತಾಧಿಕಾರಿ, ಇಡ್ಕಿದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲದಾಸ್ ಭಕ್ತ, ಪ್ರಮುಖರಾದ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ರಮೇಶ್ ಭಟ್ ಮಿತ್ತೂರು ಭಂಡಾರಮನೆ, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಸುರೇಶ್ ಕೆ. ಎಸ್. ಮುಕ್ಕುಡ, ಪ್ರಕಾಶ್ ಕೆ. ಎಸ್. ಊರಿನಜಲು, ಕೆ. ವೆಂಕಟರಮಣ ಭಟ್ ಸೂರ್ಯ, ವಿಜಯಕುಮಾರ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ, ಸುರೇಶ್ ಪೂಜಾರಿ ಸೂರ್ಯ, ವಿ.ಕೆ. ಕುಟ್ಟಿ ಊರಿಮಜಲು, ಉಷಾ ಮುಂಡ್ರಬೈಲು, ಶಶಿಪ್ರಭ ಮಿತ್ತೂರು, ಇಡ್ಕಿದು ಗ್ರಾ.ಪಂ.ಸದಸ್ಯರಾದ ಎಂ.ಸುಧೀರ್ ಕುಮಾರ್ ಶೆಟ್ಟಿ, ಪುರುಷೋತ್ತಮ ಕೋಲ್ಪೆ, ಪ್ರಮುಖರಾದ ತಿಮ್ಮಪ್ಪ ಸಪಲ್ಯ ದೇವಸ್ಯ, ಆನಂದ ದೇವಸ್ಯ, ಚಂದ್ರಹಾಸ ಕೆರ್ನಂದೆಲ್ ಸೇರಿದಂತೆ ಭಕ್ತಾಧಿಗಳು ಉಪಸ್ಥಿತರಿದ್ದರು.

ಜ.15ರಂದು ಬೆಳಗ್ಗೆ ಆರು ಗಂಟೆಯಿಂದ ಸಾಯಂಕಾಲ 6ಗಂಟೆಯ ವರೆಗೆ ಅರ್ಧ ಏಕಾಹ ಭಜನೆ ಆರಂಭಗೊಳ್ಳಲಿದೆ. ಬೆಳಗ್ಗೆ ಆಶ್ಲೇಷಾ ಬಲಿ ಪ್ರಾರಂಭಗೊಳ್ಳಲಿದೆ. ಬಳಿಕ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಪಂಚಮಿ ಬಲಿ‌ ಉತ್ಸವ, ವಸಂತ ಕಟ್ಟೆ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ಜ.16ರಂದು ಕಿರುಷ಼ಷ್ಠಿ ಉತ್ಸವ ನಡೆಯಲಿದೆ. ಬೆಳಗ್ಗೆ ದೇವರ ಬಲಿ ಹಿರಡುವುದು. ದರ್ಶನ ಬಲಿ, ಬಟ್ಟಲು ಕಾಣಿಕೆ ನಡೆಯಲಿದೆ. ಬಳಿಕ ಪ್ರಸಾದ ವಿತರಣೆ ನಡೆಯಲಿದು ಸ್ಥಳದೈವ ಪಿಲಿಚಾಮುಂಡಿ ನೇಮೋತ್ಸವ ನಡೆಯಲಿದೆ. ಬಳಿಕ ಮಹಾಪೂಜೆ ನಡೆದು ಅನ್ನ ಸಂತರ್ಪಣೆ ನಡೆಯಲಿದೆ.

ಇಂದು ಕ್ಷೇತ್ರದಲ್ಲಿ
ಜ.14ರಂದು ಬೆಳಗ್ಗೆ 108 ಕಾಯಿ ಗಣಪತಿ ಹವನ ಪ್ರಾರಂಭಗೊಳ್ಳಲಿದೆ, ಮಧ್ಯಾಹ್ನ ಗಣಪತಿ ಹವನದ ಪೂರ್ಣಾಹುತಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here