ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

0

ನಿಮ್ಮ ಆಟೋದಲ್ಲಿರುವ ಪುಟಾಣಿಗಳು ಮುಖ್ಯ ಮಂತ್ರಿ, ಪ್ರಧಾನಿ, ರಾಷ್ಟ್ರಪತಿಯೂ ಆಗಬಹದು-ಎಸ್.ಐ ಆಂಜನೇಯ ರೆಡ್ಡಿ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಹಿ.ಪ್ರಾ ಶಾಲಾ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024″ ನೀವು ರಸ್ತೆ ಸುರಕ್ಷತಾ ಹೀರೋ ಆಗಿರಿ ” ಎನ್ನುವ ಧ್ಯೇಯ ವಾಕ್ಯದೊಂದಿಗೆ ಜ.13ರಂದು ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ನಗರ ಪೊಲೀಸ್ ಠಾಣಾ ಎಸ್.ಐ ಆಂಜನೇಯ ರೆಡ್ಡಿ ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿ, ನಿಮ್ಮ ಆಟೋದಲ್ಲಿ ಬರುವ ಒಂದು ಮಗು ಮುಂದಿನ ಮುಖ್ಯಮಂತ್ರಿ, ಪ್ರಧಾನ ಮಂತ್ರಿ ಅಥವಾ ರಾಷ್ಟ್ರಪತಿ ಆಗಿರಬಹುದು. ಈ ನಿಟ್ಟಿನಲ್ಲಿ ಆಟೋ ಚಾಲಕರು ರಸ್ತೆ ಸುಕ್ಷತಾ ನಿಯಮಗಳನ್ನು ಪಾಲಿಸಬೇಕು. ಯಾರೂ ಕೂಡ ರಸ್ತೆ ನಿಯಮ ಉಲ್ಲಂಘಿಸಬಾರದು. ಮಕ್ಕಳನ್ನು ಕರೆತರುವ ವಾಹನದ ಚಾಲಕರ ಮೇಲೆ ಪೋಷಕರು ಇಟ್ಟಿರುವ ನಂಬಿಕೆಗೆ ಚ್ಯುತಿ ಬಾರದಂತೆ ವಾಹನವನ್ನು ಚಲಾಯಿಸುವಂತೆ ತಿಳಿಸಿದರು.


ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕಿ ಭಗಿನಿ ಪ್ರಶಾಂತಿ ಬಿ ಎಸ್, ಪುತ್ತೂರು ನಗರ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸ್ಕರಿಯ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ವಿದುಷಿ ನಯನಾ ವಿ ರೈ, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷ ಸತೀಶ್ ಆರ್, ಕಾರ್ಯಕಾರಿ ಸಮಿತಿ ಸದಸ್ಯೆ ಅಸ್ಮಾ ಹಾಗೂ ಗೈಡ್ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಉಪಸ್ಥಿತರಿದ್ದರು.


ಗೌರವಾರ್ಪಣೆ:
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿದ್ದ ಜನಸ್ನೇಹಿ ಪೊಲೀಸ್ ಉಪನಿರೀಕ್ಷಕ ಆಂಜನೇಯ ರೆಡ್ಡಿ ಯವರನ್ನು ಸನ್ಮಾನಿಸಲಾಯಿತು. ಬೆಥನಿ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ವಾಮಂಜೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಟ್ಲ್ ಫ್ಲವರ್ ಹಾಗೂ ಬೆಥನಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳ ವತಿಯಿಂದ ನಡೆದ ನೃತ್ಯ ರೂಪಕವನ್ನು ರಚಿಸಿ ನಿರ್ದೇಶಿಸಿದ ಶಾಲಾ ಶಿಕ್ಷಕ ಬಾಲಕೃಷ್ಣ ಪೊರ್ದಾಲ್, ನೃತ್ಯ ಸಂಯೋಜನೆ ಮಾಡಿದ ವಿದುಷಿ ಸ್ವಸ್ತಿಕಾ ಆರ್ ಶೆಟ್ಟಿ ಸನ್ಮಾನಿಸಲಾಯಿತು. ಹಾಡು ರಚಿಸಿದ ಸಾಹಿತಿ, ಸಂಜಯ ನಗರ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ರಮೇಶ್ ಉಳಯರನ್ನು ಅವರ ಶಾಲೆಗೆ ತೆರಳಿ ಸನ್ಮಾನಿಸಲಾಯಿತು.
ಶಾಲಾ ಗೈಡ್ಸ್ ವಿದ್ಯಾರ್ಥಿನಿಯರಾದ ದ್ರಿಶಾ, ಆರಾಧನಾ, ತನ್ವಿ ಹಾಗೂ ಬೃಂದಾ ಪ್ರಾರ್ಥಿಸಿದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್ ಸ್ವಾಗತಿಸಿ, ಕಬ್ ಶಿಕ್ಷಕಿ ದಿವ್ಯ ವಂದಿಸಿದರು. ಸ್ಕೌಟ್ ಶಿಕ್ಷಕ ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ಆಟೋ ಚಾಲಕರು ಹಾಗೂ ಮಕ್ಕಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here