ನೆಲ್ಯಾಡಿ: ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪಕ್ಕೆ ಸಂಬಂಧಿಸಿ ಇಚ್ಲಂಪಾಡಿ ನಿವಾಸಿ ಪುರುಷೋತ್ತಮ ಓ ದವಳಗಿರಿ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಪುರುಷೋತ್ತಮ ಓ ದವಳಗಿರಿ ಅವರು ಕ್ರಿಶ್ಚಿಯನ್ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣವಾದ ತನ್ನ ಪೇಸ್ಬುಕ್ ಖಾತೆಯಲ್ಲಿ ಹರಿಬಿಟ್ಟು ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕೆಡಿಸಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಇಚ್ಲಂಪಾಡಿ ಬರಮಾರು ಕೈಪನಡ್ಕ ನಿವಾಸಿ ಮೇಹಿಜಾರ್ಜ್ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪುರುಷೋತ್ತಮ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.