ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಜ.14ರಿಂದ ಜ. 16ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಥಮ ದಿನವಾದ ಜ. 14ರಂದು ಬೆಳಗ್ಗೆ 108 ಕಾಯಿ ಗಣಪತಿ ಹವನ ಪ್ರಾರಂಭಗೊಂಡಿತು, ಮಧ್ಯಾಹ್ನ ಗಣಪತಿ ಹವನದ ಪೂರ್ಣಾಹುತಿ ನಡೆಯಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಿತು. ಬೆಳಗ್ಗಿನಿಂದ ಶ್ರೀ ದುರ್ಗಾಮಲರಾಯ ಯಕ್ಷಪ್ರತಿಷ್ಠಾನದ ವತಿಯಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು.
ಕ್ಷೇತ್ರದ ಪದ ನಿಮಿತ್ತ ಆಡಳಿತಾಧಿಕಾರಿ, ಇಡ್ಕಿದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲದಾಸ್ ಭಕ್ತ, ಪ್ರಮುಖರಾದ ಪಿ.ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಪ್ರಕಾಶ್ ಕೆ. ಎಸ್. ಊರಿನಜಲು, ಸುರೇಶ್ ಕೆ. ಎಸ್. ಮುಕ್ಕುಡ, ಕೆ. ವೆಂಕಟರಮಣ ಭಟ್ ಸೂರ್ಯ, ವಿಜಯಕುಮಾರ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ, ಸುರೇಶ್ ಪೂಜಾರಿ ಸೂರ್ಯ, ವಿ.ಕೆ. ಕುಟ್ಟಿ ಊರಿಮಜಲು, ಉಷಾ ಮುಂಡ್ರಬೈಲು, ಶಶಿಪ್ರಭ ಮಿತ್ತೂರು ಸೇರಿದಂತೆ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಜ.15ರಂದು ಕ್ಷೇತ್ರದಲ್ಲಿ ಪಂಚಮಿ ಉತ್ಸವ
ಜ.15ರಂದು ಬೆಳಗ್ಗೆ ಆರು ಗಂಟೆಯಿಂದ ಸಾಯಂಕಾಲ 6ಗಂಟೆಯ ವರೆಗೆ ಅರ್ಧ ಏಕಾಹ ಭಜನೆ ಆರಂಭಗೊಳ್ಳಲಿದೆ. ಬೆಳಗ್ಗೆ ಆಶ್ಲೇಷಾ ಬಲಿ ಪ್ರಾರಂಭಗೊಳ್ಳಲಿದೆ. ಬಳಿಕ ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಪಂಚಮಿ ಬಲಿ ಉತ್ಸವ, ವಸಂತ ಕಟ್ಟೆ ಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.