ಕಬಕ: ವಿದ್ಯಾಪುರ ಅಂಗನವಾಡಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ

0

ಪ್ರತೀ ಗ್ರಾಮಗಳ ಅಭಿವೃದ್ದಿಗೆ ಅನುದಾನ ಹಂಚಿಕೆ: ಶಾಸಕ ಅಶೋಕ್ ರೈ

ಪುತ್ತೂರು: ಸರಕಾರದಿಂದ ಬರುವ ಅನುದಾನವನ್ನು ಸಮಪ್ರಮಾಣದಲ್ಲಿ ಎಲ್ಲಾ ಗ್ರಾಮಗಳಿಗೂ ಹಂಚಿಕೆ ಮಾಡುವ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಮಾಡಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.


ಕಬಕ ವಿದ್ಯಾಪುರ ಅಂಗನವಾಡಿಗೆ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ‌ ಶಾಸಕ ಅಶೋಕ್ ರೈ, ಶಿಥಿಲಾವಸ್ಥೆಯಲ್ಲಿದ್ದ ಈ ಅಂಗನವಾಡಿ ಕಟ್ಟಡಕ್ಕೆ ಅನುದಾನ ನೀಡುವಂತೆ ಸ್ಥಳೀಯರು ಮನವಿ ಮಾಡಿದ್ದರು. ರೂ.13 ಲಕ್ಷ ವೆಚ್ಚದಲ್ಲಿ ಹೊಸ ಕಟ್ಟಡ ಮೂರು ತಿಂಗಳೊಳಗೆ ಕಾಮಗಾರಿ ಪೂರ್ಣವಾಗಲಿದೆ. ಕಾಮಗಾರಿಯ ಗುಣಮಟ್ಟ ಚೆನ್ನಾಗಿರುವಂತೆ ಗ್ರಾಮಸ್ಥರು ಎಚ್ಚರವಹಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಐದು ಗ್ಯಾರಂಟಿ ಯೋಜನೆಗಳು ಮನೆ ಮನೆಯನ್ನು ಬೆಳಗಿಸಿದೆ ಎಂದು ಹೇಳಿದರು.

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷ ಡಾ.ರಾಜಾರಾಂ ಮಾತನಾಡಿ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ವ್ಯಾಪ್ತಿಯ ಗ್ರಾಮಗಳಿಗೆ ಹೆಚ್ಚಿನ ಅನುದಾನವನ್ನು ಶಾಸಕರು ನೀಡಿದ್ದಾರೆ. ಹತ್ತು ಹಲವು ವರ್ಷಗಳ ಬೇಡಿಕೆಗಳು ಒಂದೊಂದಾಗಿ ಈಡೇರುತ್ತಿದೆ. ಅಭಿವೃದ್ದಿಯಲ್ಲಿ ರಾಜಕೀಯ ಮಾಡದ ಶಾಸಕರನ್ನು ಅಭಿನಂದನೆ ಮಾಡುವುದಾಗಿ ಹೇಳಿದರು. ಕಬಕ ಗ್ರಾಪಂ ಸದಸ್ಯ ಸಾಬಾ ಮಾತನಾಡಿ, ವಿದ್ಯಾಪುರ ಅಂಗನವಾಡಿಯಲ್ಲಿ 35 ಮಕ್ಕಳಿದ್ದಾರೆ. ಇಲ್ಲಿಗೆ ಹೊಸ ಕಟ್ಟಡ ಕೊಡಿ ಎಂದು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದೇವೆ ಆದರೆ ಈ ಬಾರಿ ಯೋಗ ಕೂಡಿ ಬಂದಿದೆ ಎಂದು ಹೇಳಿದರು.

ಕಬಕ ಗ್ರಾಪಂ ಸದಸ್ಯ ಸಾಬಾ, ವಲಯ ಅಧ್ಯಕ್ಷ ದಾಮೋದರ್ ಕಬಕ, ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷ ಮೋಹನ್ ಗುರ್ಜಿನಡ್ಕ, ಮೌಲಾ ಕಬಕ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here