ರಾಮಕುಂಜ: ತೆಲಂಗಾಣ ರಾಜ್ಯದ ಕಾಮರೆಡ್ಡಿ ನಗರದಲ್ಲಿ ನಡೆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 67ನೇ ರಾಷ್ಟ್ರಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಾರ್ತಿಕ್ ಹಾಗೂ ಹಿತೇಶ್ ಅವರು ಖೇಲೋ ಇಂಡಿಯಾ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಕರ್ನಾಟಕ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಕಾರ್ತಿಕ್ (ಕೊಣಾಲು ಗ್ರಾಮದ ಅಂಬರ್ಜೆ ನೋಣಯ್ಯ ಪೂಜಾರಿ ಹಾಗೂ ಶೋಭಾ ದಂಪತಿಯ ಪುತ್ರ) ಹಾಗೂ ಹಿತೇಶ್ ಎನ್.ಕೆ.( ಹಳೆನೇರೆಂಕಿ ಗ್ರಾಮದ ಕದ್ರ ನಾರಾಯಣ ಪೂಜಾರಿ ಹಾಗೂ ಮಾಲತಿ ದಂಪತಿಯ ಪುತ್ರ) ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಖೇಲೋ ಇಂಡಿಯಾ ಕಬ್ಬಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲಾ ರೈಯವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಮುಖ್ಯಗುರು ಸತೀಶ್ ಭಟ್, ಶಾಲಾ ಶಿಕ್ಷಕ ವೃಂದ, ಆಡಳಿತ ಮಂಡಳಿ, ಪೋಷಕರು, ಹಿರಿಯ ವಿದ್ಯಾರ್ಥಿ ಸಂಘದವರು ಪ್ರೋತ್ಸಾಹ ನೀಡಿದ್ದಾರೆ.