ಪುತ್ತೂರು: ಪಡುಮಲೆ ಶ್ರೀ ಪೂಮಾಣಿ ಕಿನ್ನಿಮಾಣಿ ಹಾಗೂ ವ್ಯಾಘ್ರಚಾಮುಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಅಂಗವಾಗಿ ಜ.14ರಂದು ಭಂಡಾರ ತೆಗೆದು, ಧ್ವಜಾರೋಹಣ, ಬೀರತಂಬಿಲ ನಡೆಯಿತು. ಜ.15ರಂದು 48 ಕಾಯಿ ಗಣಪತಿ ಹೋಮ ನಡೆಯಿತು. ಬಳಿಕ ಆನೆ ಚಪ್ಪರ ಏರಿಸುವುದು, ಮಕರ ತೋರಣ ಏರಿಸುವುದು, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಪಲ್ಲಕ್ಕಿ ಉತ್ಸವ, ಬೀರತಂಬಿಲ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ರವಿರಾಜ ಶೆಟ್ಟಿ ಅಣಿಲೆ, ಸದಸ್ಯರಾದ ರವಿರಾಜ ರೈ ಸಜಂಕಾಡಿ, ಶ್ರೀಧರ ನಾಯ್ಕ ನೇರ್ಲಪಾಡಿ, ವಿಶ್ವನಾಥ ಪೂಜಾರಿ ಮೂಲೆ, ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ ಪೂಜಾರಿ ಪದಡ್ಕ, ಕ್ಷೇತ್ರದ ಸೇನಾವರಾದ ಉದಯ ಕುಮಾರ್ ಪಡುಮಲೆ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಜ.16 ರಂದು ಕಿನ್ನಿಮಾಣಿ ದೈವದ ನೇಮ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದ್ದು, ರಾತ್ರಿ ಪಲ್ಲಕ್ಕಿ ಉತ್ಸವ, ಬೀರತಂಬಿಲ ನಡೆಯಲಿದೆ. ಬಡಗನ್ನೂರು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.