ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ-ಗೊನೆ ಮುಹೂರ್ತ

0

ರಾಮಕುಂಜ: ಜ.22ರಿಂದ 26ರ ತನಕ ನಡೆಯಲಿರುವ ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವದ ಅಂಗವಾಗಿ ಜ.15ರಂದು ಗೊನೆ ಮುಹೂರ್ತ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕರಾದ ಅನಂತಕೃಷ್ಣ ಉಡುಪ ಅವರು ಗೊನೆ ಮುಹೂರ್ತ ನೆರವೇರಿಸಿದರು. ದೇವಸ್ಥಾನದ ಸಲಹಾ ಸಮಿತಿ ಅಧ್ಯಕ್ಷರು, ಸದಸ್ಯರು, ಪವಿತ್ರಪಾಣಿಗಳು, ಉತ್ಸವ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ವರ್ಷಾವಧಿ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.22ರಂದು ರಾತ್ರಿ ಧ್ವಜಾರೋಹಣದೊಂದಿಗೆ ಆರಂಭಗೊಳ್ಳಲಿದ್ದು ಜ.26ರಂದು ರಾತ್ರಿ ಧ್ವಜಾವರೋಹಣದೊಂದಿಗೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here