ಶಬರಿಮಲೆಯಿಂದ ಹಿಂದಿರುಗುವ ವೇಳೆ ಘಟನೆ-ಚಾಲಕನ ನಿಯಂತ್ರಣ ತಪ್ಪಿದ ಟಿ.ಟಿ ಪಲ್ಟಿ-ಹಲವರಿಗೆ ಗಾಯ

0

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡು ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ನಡೆದಿದೆ. ವಿಟ್ಲದ ಚಂದಳಿಕೆ ಎಂಬಲ್ಲಿ ಈ ಘಟನೆ ನಡೆದಿದ್ದು ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದಾರೆ.

ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ವಿಟ್ಲದ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ ವಾಹನದಲ್ಲಿದ್ದ ಮಾಲಾದಾರಿಗಳು ಉಜಿರೆ ಮೂಲದವರಾಗಿದ್ದು, ಶಬರಿಮಲೆ ತೆರಳಿ ಹಿಂತಿರುಗುತ್ತಿದ್ದರು.ಇವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ.

LEAVE A REPLY

Please enter your comment!
Please enter your name here